ಮೇ.5ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಬುಧವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ, 5ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದೆ.
ಈ ಸಂಬಂಧ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ವಿ.ಎಸ್. ಸಂಪತ್ ಅವರು, ಮೇ 5 ಕ್ಕೆ ಚುನಾವಣಾ ದಿನಾಂಕ ನಿಗದಿ ಪಡಿಸಲಾಗಿದ್ದು, ಇಂದಿನಿಂದಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದರು.
ಏಪ್ರಿಲ್ 10ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲ್ಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 17 ಹಾಗೂ ನಾಮಪತ್ರ ಪರಿಶೀಲನೆಗೆ ಏಪ್ರಿಲ್ 18 ಕಡೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 20 ಕೊನೆಯ ದಿನವಾಗಿರುತ್ತದೆ. ಇನ್ನು ಮೇ 8ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ವಿಧಾನಸಭೆ ಚುನಾವಣೆ ಸಂಬಂಧ 50,446 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಮತ್ತು ಎಲ್ಲಾ ಕಡೆ ಎಲೆಕ್ಟ್ರಾನಿಕ್ ವೋಟಿಂಗ್ ಮಸಿನ್ ಬಳಕೆ ಮಾಡಲಾಗುವುದು ಎಂದು ಸಂಪತ್ ಅವರು ತಿಳಿಸಿದರು.
ಎಸ್‌ಸಿ 36 ಹಾಗೂ ಎಸ್ಟಿಗೆ 15 ಕ್ಷೇತ್ರಗಳನ್ನು ಮೀಸಲಿರಸಲಾಗಿದೆ. ರಾಜ್ಯದಲ್ಲಿ ಒಟ್ಟು 4.18ಕೋಟಿ ಮತದಾರಿದ್ದು, ಸಂಪೂರ್ಣ ಕಾನೂನಿನ ಕಣ್ಗಾವಲಿನಲ್ಲಿ ಚುನಾವಣೆ ನಡೆಸಲಾಗುವುದು ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರಾವಧಿ ಜೂ.3 ಕ್ಕೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮೇ ವೇಳೆಗೆ ಚುನಾವಣೆ ನಡೆಸುವ ಪ್ರಸ್ತಾಪ ಆಯೋಗದ ಮುಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


