ಬೇಣಿ ವಿವಾದ: ಯುಪಿಎ ಮೇಲೆ ಮುಲಾಯಂ ಮಮತೆ

ನವದೆಹಲಿ: ಸಮಾಜವಾದಿ ಪಕ್ಷ(ಎಸ್ಪಿ)ದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಬೇಣಿ ಪ್ರಸಾದ್ ವರ್ಮಾ ಅವರ ಬಗ್ಗೆ ತಮಗೆ "ಕೋಪ'ವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಬಗ್ಗೆ ಮಮತೆ ತೋರಿದ್ದಾರೆ. ಇದರಿಂದ ಯುಪಿಎ ಸರ್ಕಾರ ಕೊಂಚ ನಿರಾಳವಾಗಿದೆ.
ಬೇಣಿ ವಿವಾದ ಸಂಬಂಧ ಇಂದು ಬೆಳಗ್ಗೆ ನಡೆದ ಪಕ್ಷದ ಸಂಸದೀಯ ಮಂಡಳಿಯ ಸಭೆಯಲ್ಲಿ, ಯುಪಿಎ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂಬ ಸಂದೇಶವನ್ನು ಮೂಲಾಯಂ ಸಿಂಗ್ ಅವರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ 'ನಾನು ಕೋಪಗೊಂಡಿರುವ ಹಾಗೆ ಕಾಣಿಸುತ್ತೇನೆಯೇ?' ಎಂದು ಮೂಲಾಯಂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಬೇಣಿ ವಿವಾದಾತ್ಮ ಹೇಳಿಕೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಯುಪಿಎಗೆ ನೀಡಿರುವ ಬೆಂಬಲ ವಾಪಸ್ ಪಡೆಯುವ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಾಯಂ ಸಿಂಗ್ ಯಾದವ್ ತಿಳಿಸಿದ್ದಾರೆ.
ಬೇಣಿ ಪ್ರಸಾದ್ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಮುಲಾಯಂ ಸಿಂಗ್ ಅವರಿಗೆ ಉಗ್ರರೊಂದಿಗೆ ಸಂಪರ್ಕ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ ವಿಷಾದಕ್ಕೂ, ಕ್ಷಮೆಗೂ ಭಾರಿ ವ್ಯತ್ಯಾಸವಿದೆ ಎಂದಿದ್ದ ಸಮಾಜವಾದಿ ಪಕ್ಷ ಸಂಸತ್ನಲ್ಲೇ ಬೇಣಿ ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದಿತ್ತು. ಅಲ್ಲದೆ ಸರ್ಕಾರಕ್ಕೆ ಬೆಂಬಲ ಮುಂದುವರೆಸುವ ಬಗ್ಗೆ ಇಂದಿನ ಸಂಸದೀಯ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


