ಈಗಿನ ಸುದ್ದಿ

ಸಂಜಯ್ ದತ್‌ಗೆ 5 ವರ್ಷ ಜೈಲು ಶಿಕ್ಷೆ

ಸಂಜಯ್ ದತ್‌ಗೆ 5 ವರ್ಷ ಜೈಲು ಶಿಕ್ಷೆ
Published On :

ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿಯಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಸುಪ್ರೀಂ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಟಾಡಾ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, ಸಂಜಯ್ ದತ್‌ಗೆ ಟಾಡಾ ಕೋರ್ಟ್ ನೀಡಿದ್ದ 6 ವರ್ಷದ ಶಿಕ್ಷೆಯನ್ನು ಐದು ವರ್ಷಕ್ಕೆ ಇಳಿಕೆ ಮಾಡಿ ಆದೇಶಿಸಿದೆ ಮತ್ತು ಒಂದು ತಿಂಗಳಲ್ಲಿ ಕೋರ್ಟ್‌ಗೆ ಶರಣಾಗುವಂತೆ ಸಂಜಯ್ ದತ್‌ಗೆ ಸೂಚಿಸಿದೆ.

ಸದ್ಯ ಜಾಮೀನಿನ ಮೇಲೆ ಹೊರಗಿರುವ ಸಂಜಯ್ ದತ್ ಅವರು ಈ ಹಿಂದೆ 18 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಹೀಗಾಗಿ ಅವರು ಇನ್ನೂ ಮೂರು ವರ್ಷ 6 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಿದೆ.

2006ರಲ್ಲಿ ಅಕ್ರಮವಾಗಿ 9ಎಂಎಂ ಪಿಸ್ತೂಲ್ ಹಾಗೂ ಎಕೆ 56 ರೈಫಲ್ ಹೊಂದಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಂಜಯ್ ದತ್ ಅವರನ್ನು ಬಂಧಿಸಿಲಾಗಿತ್ತು. ನಂತರ ದತ್ ಅವರು 2007ರಲ್ಲಿ ಟಾಡಾ ಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಜಾಮೀನು ಸಹ ಪಡೆದುಕೊಂಡಿದ್ದರು.

1993ರ ಮಾರ್ಚ್ನಲ್ಲಿ ಮುಂಬೈನ 13 ಸ್ಥಳಗಳಲ್ಲಿ ಸ್ಫೋಟ ಸಂಭವಿಸಿತ್ತು, ಈ ಸರಣಿ ಸ್ಫೋಟಗಳಲ್ಲಿ 257 ಜನ ಮೃತಪಟ್ಟಿದ್ದರು ಮತ್ತು 713 ಜನ ಗಾಯಗೊಂಡಿದ್ದರು.

ನಟ ಸಂಜಯ್ ದತ್ ಅವರು ಈಗ ಮತ್ತೆ ಜೈಲು ಪಾಲಾಗುವ ಸಾಧ್ಯತೆ ಇದ್ದು, ಸಂಜಯ್ ದತ್ ಜೈಲಿಗೆ ಹೋದ್ರೆ ನಿರ್ಮಾಪಕರಿಗೆ ಕೋಟ್ಯಾಂತರ ರುಪಾಯಿ ನಷ್ಟವಾಗುವ ಸಾಧ್ಯತೆ ಇದೆ. ಒಂದು ಅಂದಾಜಿನ ಪ್ರಕಾರ ಸಂಜಯ್ ದತ್ ಮೇಲೆ ಬಾಲಿವುಡ್ 300-350 ಕೋಟಿ ರುಪಾಯಿ ಹೂಡಿಕೆ ಮಾಡಿದೆ ಎನ್ನಲಾಗುತ್ತಿದೆ.

ನೆನೆಗುದಿಗೆ ಬಿದ್ದ ದತ್ ಅವರ ಮುಂದಿನ ಪ್ರಾಜೆಕ್ಟ್ಗಳು:
ಶೇರ್, ಜಂಜೀರ್, ಮುನ್ನಾ ಬಾಯಿ ಚಲೇ ಡೆಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.
ಘನ್ ಚಕ್ಕರ್ ಮತ್ತು ಪಿಕೆ ಚಿತ್ರದ ಚಿತ್ರೀಕರಣ ಆರಂಭವಾಗಬೇಕಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.