ಇಟಲಿ ನಾವಿಕರಿಗಿಲ್ಲ ಗಲ್ಲು ಶಿಕ್ಷೆ: ಖುರ್ಷಿದ್
ನವದೆಹಲಿ: ಕಡೆಗೂ ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದಿರುವ ಇಟಲಿ ಸರ್ಕಾರ, ಭಾರತೀಯ ಮೀನುಗಾರರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ತನ್ನ ನೌಕಾಪಡೆ ಸಿಬ್ಬಂದಿಯನ್ನು ವಿಚಾರಣೆಗಾಗಿ ಭಾರತಕ್ಕೆ ಕಳುಹಿಸಲು ಒಪ್ಪಿಕೊಂಡಿದ್ದು, ಅವರು ಇಂದು ಮಧ್ಯಾಹ್ನದ ವೇಳೆಗೆ ಭಾರತಕ್ಕೆ ಆಗಮಿಸಲಿದ್ದಾರೆ.
ಇಟಲಿಯ ರಾಯಭಾರಿ ಡೇನಿಯಲ್ ಮ್ಯಾನ್ಸಿನಿ ಅವರು ತನ್ನ ದೇಶದ ಪ್ರಜೆಗಳು ಮಾರ್ಚ್,22ಕ್ಕೆ ವಿಚಾರಣೆಗಾಗಿ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ಲಿಖಿತ ಭರವಸೆ ನೀಡಿದ್ದರು. ಅದರಂತೆ ಇಟಲಿ ನೌಕಾ ಸಿಬ್ಬಂದಿ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.
ಈ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರದ ಹಲವು ಸಚಿವರು ಪ್ರತಿಕ್ರಿಯೆ ನೀಡಿದ್ದು, ಇಟಲಿ ನಾಗರಿಕರನ್ನು ವಾಪಸ್ ಕರೆಸುವ ಸಂಬಂಧ ಉದ್ಭವಿಸಿದ್ದ ಸಮಸ್ಯೆ ಈಗ ಪರಿಹಾರವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅಶ್ವಿನಿ ಕುಮಾರ್ ಅವರು ಹೇಳಿದ್ದಾರೆ.
ಲೋಕಸಭೆಯಲ್ಲೂ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇಟಲಿ ನೌಕಾಪಡೆಯ ಆ ಇಬ್ಬರು ಸಿಬ್ಬಂದಿ ಈಗ ಭಾರತಕ್ಕೆ ಆಗಮಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ನೀಡಿದ ಗಡುವಿನ ಒಳಗೆ ವಾಪಸ್ ಬಂದರೆ ಇಟಲಿ ಅವರನ್ನು ಬಂಧಿಸುವುದಿಲ್ಲ ಎಂದು ಭಾರತ, ಇಟಲಿಗೆ ಹೇಳಿದೆ. ಅಲ್ಲದೆ ಇದು ಅಪರೂಪದಲ್ಲಿ ಅಪರೂಪ ಪ್ರಕರಣವಲ್ಲವಾದ್ದರಿಂದ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವುದಿಲ್ಲ ಎಂಬ ಭರವಸೆಯನ್ನು ನಾವು ನೀಡಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ಅವರು ಲೋಕಸಭೆ ತಿಳಿಸಿದರು.
ಇನ್ನು ಇಟಲಿ ನಾವಿಕರ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಒಟ್ಟಾಗಿ ಕೆಲಸ ಮಾಡಿವೆ ಎಂದು ಗೃಹ ಖಾತೆ ರಾಜ್ಯ ಸಚಿವ ಆರ್ಪಿಎನ್ ಸಿಂಗ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

