'ದತ್ ಮನವಿ ಸಲ್ಲಿಸಿದರೆ ರಾಜ್ಯಪಾಲರು ವಿವೇಚನಾಧಿಕಾರ ಬಳಸಬಹುದು'
ನವದೆಹಲಿ: 1993 ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಪ್ಪಿತಸ್ಥನಾಗಿ ಜೈಲು ಶಿಕ್ಷೆಗೊಳಪಟ್ಟಿರುವ ಬಾಲಿವುಡ್ ನಟ ಸಂಜಯ್ ದತ್ ನ್ನು ಕ್ಷಮಿಸಬೇಕೆಂದು ಪ್ರೆಸ್ ಕೌನ್ಸಿಲ್ ಮುಖ್ಯಸ್ಥ ಮಾರ್ಕಂಡೇಯ ಕಾಟ್ಜು ಮಹಾ ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ.
ಅದೇ ವೇಳೆ ದತ್ ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ ಮನವಿ ಸಲ್ಲಿಸಿದರೆ, ಈ ಬಗ್ಗೆ ಮಹಾರಾಷ್ಟ್ರ ಸರ್ಕಾರ ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳಲಿದೆ ಎಂದು ಮಹಾ ಸರ್ಕಾರ ಶುಕ್ರವಾರ ಹೇಳಿದೆ.
ಒಂದು ವೇಳೆ ದತ್ ಮನವಿ ಸಲ್ಲಿಸಿದರೆ ರಾಜ್ಯಪಾಲರು ವಿವೇಚನಾಧಿಕಾರ ಬಳಸಿ ಕ್ಷಮೆ ನೀಡುವ ಅಧಿಕಾರವಿದೆ. ಆದಾಗ್ಯೂ ನಾವು ಈ ಬಗ್ಗೆ ಮಾತನಾಡುವಂತಿಲ್ಲ ಎಂದು ಕಾನೂನು ಸಚಿವ ಅಶ್ವಿನಿ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಮನೀಷ್ ತಿವಾರಿ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಸಂಜಯ್ ದತ್ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿರುವ ಸುಪ್ರೀಂ ಕೋರ್ಟ್ ತೀರ್ಮಾನವನ್ನು ಪ್ರಶ್ನಿಸಿ, ದತ್ಗೆ ಕ್ಷಮೆ ನೀಡಬೇಕೆಂದು ಕಾಟ್ಜು ಅವರು ಮಹಾರಾಷ್ಟ್ರ ರಾಜ್ಯಪಾಲ ಕೆ. ಶಂಕರನಾರಾಯಣ್ ಅವರಿಗೆ ಪತ್ರ ಬರೆದಿದ್ದಾರೆ.
ಕಾಟ್ಜು ಅವರ ನಿಲುವನ್ನು ಪ್ರಶ್ನಿಸಿದ ಬಿಜೆಪಿ ಸಂಸದ ಬಲ್ಬೀರ್ ಪುಂಜ್, ಕಾಟ್ಜು ಅವರು ಸುಪ್ರೀಂ ಕೋರ್ಟ್ನ ನ್ಯಾಯಧೀಶರಾಗಿಲ್ಲ ಎಂಬುದನ್ನು ಮರೆತಂತಿದೆ. ಅವರು ಪಿಸಿಐ ಮುಖ್ಯಸ್ಥ. ಕಾನೂನು ಪ್ರಕಾರವೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸುಪ್ರೀಂ ತೀರ್ಪನ್ನು ಒಪ್ಪಿಕೊಳ್ಳಲೇ ಬೇಕು ಇಲ್ಲವಾದರೆ ಬಡವರಿಗೊಂದು ನ್ಯಾಯ, ಖ್ಯಾತನಾಮರಿಗೊಂದು ನ್ಯಾಯ ನಮ್ಮ ಕಾನೂನು ವ್ಯವಸ್ಥೆಯಲ್ಲಿದೆ ಎಂದು ಜನ ತಪ್ಪುತಿಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

