ಕೇರಳ ರಾಜ್ಯಪಾಲರಾಗಿ ನಿಖಿಲ್ ಕುಮಾರ್ ಪ್ರಮಾಣ
ತಿರುವನಂತಪುರಂ: ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ನಾಗಲ್ಯಾಂಡ್ ಮಾಜಿ ರಾಜ್ಯಪಾಲ ನಿಖಿಲ್ ಕುಮಾರ್ ಅವರು ಶನಿವಾರ ಕೇರಳದ 20ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕೇರಳ ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಅವರು ನಿಖಿಲ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಮಾರಂಭದಲ್ಲಿ ಕೇರಳ ಮುಖ್ಯಮಂತ್ರಿ ಓಮನ್ ಚಾಂಡಿ ಹಾಗೂ ಅವರ ಸಂಪುಟ ಸಹದ್ಯೋಗಿಗಳು ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.
1963ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ 71 ವರ್ಷದ ಕುಮಾರ್ ಅವರು ದೆಹಲಿ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶ ಮಾಡಿದ ಕುಮಾರ್ ಅವರು ಬಿಹಾರದಿಂದ ಲೋಕಸಭಾ ಸದ್ಯಸರಾಗಿಯೂ ಆಯ್ಕೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

