ಈಗಿನ ಸುದ್ದಿ

ಮುಷರ್ರಫ್‌ಗೆ ಉಗ್ರರಿಂದ ಜೀವ ಬೆದರಿಕೆ

Published On :

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರ್ರಫ್ ಅವರಿಗೆ ಪಾಕ್ ತಾಲಿಬಾನ್ ಉಗ್ರರು ಹತ್ಯೆ ಮಾಡುವುದಾಗಿ ಶನಿವಾರ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ತಾಲಿಬಾನ್ ಉಗ್ರರು, ಮುಷರ್ರಫ್ ಅವರು ಮರಳಿ ಪಾಕಿಸ್ತಾನಕ್ಕೆ ಬಂದರೆ, ಅವರನ್ನು ಆತ್ಮಾಹುತಿ ಬಾಂಬರ್‌ಗಳನ್ನು ಬಳಸಿ ಹತ್ಯೆ ಮಾಡುವುದಾಗಿ ಹೇಳಿಕೊಂಡಿದೆ.

ಮುಂಬರುವ ಪಾಕ್ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಮುನ್ನಡೆಸುವ ಉದ್ದೇಶದಿಂದ ಮಾಜಿ ಸೇನಾ ಆಡಳಿತಗಾರ ಮುಷರ್ರಫ್ ಅವರು ಮಾರ್ಚ್ 24ರಂದು ಪಾಕಿಸ್ತಾನಕ್ಕೆ ಆಗಮಿಸುತ್ತಿದ್ದು, ಈ ಸಂಬಂಧ ತಮ್ಮ ಮೇಲಿರುವ ವಿವಿಧ ಪ್ರಕರಣ ಸಂಬಂಧ ಪಾಕಿಸ್ತಾನದ ನ್ಯಾಯಾಲಯದಿಂದ ನಿನ್ನೆ ಬಂಧನಪೂರ್ವ ಜಾಮೀನು ಪಡೆದುಕೊಂಡಿದ್ದಾರೆ. ಈ ಮೂಲಕ ಬಂಧನ ಭೀತಿ ಎದುರಿಸುತ್ತಿದ್ದ ಮುಷರ್ರಫ್ ಪಾಕ್‌ಗೆ ಆಗಮಿಸುವ ಹಾದಿ ಸುಗಮವಾಗಿತ್ತು. ಆದರೆ ಪಾಕ್ ಕೋರ್ಟ್ ಬಂಧನಪೂರ್ವ ಜಾಮೀನು ನೀಡುತ್ತಿದ್ದಂತೆ ಉಗ್ರರು ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ.

ಉಗ್ರರ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಮುಷರ್ರಫ್ ಅವರು ತಮಗೆ ಸೂಕ್ತ ಭದ್ರತೆ ಹಾಗೂ ಬುಲೆಟ್ ಪ್ರೂಫ್ ವಾಹನ ಒದಗಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.