ಈಗಿನ ಸುದ್ದಿ

ಬಳ್ಳಾರಿಯಲ್ಲಿ ಲಘು ಲಾಠಿ ಪ್ರಹಾರ, ರಾಮುಲು, ಶಾಂತಾ ಬಂಧನ

ಬಳ್ಳಾರಿಯಲ್ಲಿ ಲಘು ಲಾಠಿ ಪ್ರಹಾರ, ರಾಮುಲು, ಶಾಂತಾ ಬಂಧನ
Published On :

ಬಳ್ಳಾರಿ: ರಸ್ತೆ ಬದಿ ವ್ಯಾಪಾರಿಗಳ ತೆರವು ಖಂಡಿಸಿ ಬಿಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಭಟನಾ ನಿರತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಶನಿವಾರ ನಡೆದಿದೆ. ಅಲ್ಲದೆ ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಹಾಗೂ, ಬಳ್ಳಾರಿ ಸಂಸದೆ ಜೆ.ಶಾಂತಾ ಅವರು ಸೇರಿದಂತೆ ಪ್ರತಿಭಟನೆ ನಡೆಸುತ್ತಿದ್ದ ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ನಗರ ಪಾಲಿಕೆ ಎದುರಿನ ರಾಯಲ್ ವೃತ್ತದ ಬಳಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಹಾಗೂ ಶ್ರೀರಾಮುಲು ಅವರ ಬೆಂಬಲಿಗರ ನಡುವ ತೀವ್ರ ವಾಗ್ವಾದ ನಡೆಯಿತು. ಪ್ರತಿಭಟನಾಕಾರರು ಬಳ್ಳಾರಿ ಜಿಲ್ಲಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಈಗ ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಬಡವರ ಪರವಾಗಿ ನಡೆಯುತ್ತಿದ್ದ ಹೋರಾಟವನ್ನು ಹತ್ತಿಕ್ಕಿಲಾಗುತ್ತಿದೆ ಎಂದು ಆರೋಪಿಸಿರುವ ಬಿಎಸ್ಆರ್ ಕಾಂಗ್ರೆಸ್ ಕಾರ್ಯದರ್ಶಿಮದನ್ ಪಟೇಲ್ ಅವರು,  ಶ್ರೀರಾಮುಲು ಅವರನ್ನು ಬಂಧಿಸಿರುವ ಜಿಲ್ಲಾಡಳಿತದ ಕ್ರಮ ಸರಿಯಿಲ್ಲ. ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಅಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.