ಗುಜರಾತ್ನಲ್ಲಿ ನೀರಿಗಿಂತ ಮದ್ಯಪಾನ ಅಗ್ಗ: ಕಾಂಗ್ರೆಸ್
ರಾಜ್ಕೋಟ್: ಗುಜರಾತ್ನಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಕುಡಿಯುವ ನೀರಿಗಿಂತ ಮದ್ಯಪಾನ ಅಗ್ಗವಾಗಿದೆ ಎಂದು ಕಾಂಗ್ರೆಸ್ ಸೋಮವಾರ ಮೋದಿ ವಿರುದ್ದ ಕಿಡಿಕಾರಿದೆ.
ಪ್ರಧಾನಿಮಂತ್ರಿ ಆಗುವ ಕನಸು ಕಾಣುತ್ತಿರುವ ನರೇಂದ್ರ ಮೋದಿ, ಕುಡಿಯುವ ನೀರಿಗಿಂತ ಮದ್ಯಪಾನದ ಬೆಲೆಯನ್ನು ಕಡಿಮೆ ಮಾಡಿ ಸಾಮಾನ್ಯ ಜನರನ್ನು ಕಡೆಗಣಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಅರ್ಜುನ್ ಮೋದ್ವಾಡಿಯಾ ಆರೋಪಿಸಿದ್ದಾರೆ.
ಉತ್ತರ ಗುಜರಾತಿನ ಸೌರಾಷ್ಟ್ರದ 160 ಜಿಲ್ಲೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಜನರ ದಾಹವನ್ನು ನೀಗಿಸಬೇಕಾದ ನಾಯಕ, ಅಧಿಕಾರದ ದಾಹದಲ್ಲಿದ್ದಾನೆ ಎಂದು ಅವರು ಟೀಕಿಸಿದ್ದಾರೆ.
ಜನರನ್ನು ವಂಚಿಸಿ ಚುನಾವಣೆಯಲ್ಲಿ ಮೋದಿ ಗೆಲುವು ಸಾಧಿಸಿದ್ದಾರೆ ಹೊರತು, ತಮ್ಮ ಸೇವೆಗಳಿಂದಲ್ಲ ಎಂದು ದೂರಿದ್ದಾರೆ.
ಬಡವರ ಉದ್ದಾರಕ್ಕಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ ಹೊರತು ಮೋದಿ ತನ್ನ ಸ್ವಂತ ಖರ್ಚಿಗೆ ಬಳಸಲಿ ಎಂದಲ್ಲ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಮೋದಿ ಬಡವರನ್ನು ಕಡೆಗಣಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

