ಎಫ್ಡಿಐಗೆ ನಮ್ಮ ವಿರೋಧವಿದೆ: ಅಮೆರಿಕಗೆ ಬಿಜೆಪಿ ಸ್ಫಷ್ಟನೆ
ನವದೆಹಲಿ: ಚಿಲ್ಲರೆ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ(ಎಫ್ಡಿಐ)ಗೆ ವಿರೋಧ ವ್ಯಕ್ತಪಡಿಸಿರುವ ಭಾರತೀಯ ಜನತಾ ಪಕ್ಷ ತಮ್ಮ ನಿರ್ಧಾರ ಸ್ಥಿರವಾಗಿದೆ ಎಂದು ಅಮೆರಿಕಗೆ ಸ್ಫಷ್ಟನೆ ನೀಡಿದೆ.
ಸಂಸತ್ನಲ್ಲಿ ಬಿಜೆಪಿ ಚಿಲ್ಲರೆ ಕ್ಷೇತ್ರದಲ್ಲಿ ಎಫ್ಡಿಐಗೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಅಮೆರಿಕದ ರಾಯಭಾರಿ ನಾನ್ಸಿ ಜೆ ಪವಲ್ ಅವರು ಬಿಜೆಪಿ ಅಧ್ಯಕ್ಷ ರಾಜ್ನಾಥ್ಸಿಂಗ್ ಅವರನ್ನು ಭೇಟಿಮಾಡಿ ಮನವೊಲಿಸಲು ಯತ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಯಿಸಿರುವ ರಾಜನಾಥ್ಸಿಂಗ್ ಎಫ್ಡಿಐಗೆ ಸಂಪೂರ್ಣ ವಿರೋಧವಿದ್ದು, ಪಕ್ಷ ಯಾವುದೇ ಕಾರಣಕ್ಕೂ ನಿರ್ಧಾರ ಬದಲಿಸುವುದಿಲ್ಲ ಎಂದು ಸ್ಫಷ್ಟಪಡಿಸಿದ್ದಾರೆ.
ಚಿಲ್ಲರೇ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡುವುದರಿಂದ, ಸಣ್ಣ ವ್ಯಾಪಾರಿಗಳಿಗೆ ಹೊಡೆತ ನೀಡಿದಂತಾಗುತ್ತದೆ. ವಾಲ್ಮಾರ್ಟ್, ಟೆಸ್ಕೋ ಮತ್ತು ಕ್ಯಾರೆಫೋರ್ನಂತರ ಬಹುರಾಷ್ಟ್ರೀಯ ಕಂಪನಿಗಳು ಆಗಮನದಿಂದಾಗಿ ಮದ್ಯಮ ಹಾಗೂ ಚಿಲ್ಲರೆ ಕ್ಷೇತ್ರದ ವ್ಯಾಪಾರಸ್ಥರ ಹೊಟ್ಟೆಯ ಮೇಲೆ ಹೊಡೆದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರತಿಪಕ್ಷಕ್ಕೆ ಸಂಸತ್ನಲ್ಲಿ ಸೋಲುವುಂಟಾಯಿತು. ಅಮೆರಿಕದ ರಾಯಭಾರಿ ನಾನ್ಸಿ ಅವರು ರಾಜನಾಥ್ಸಿಂಗ್ ಅವರೊಡನೆ 70 ನಿಮಿಷಗಳವರೆಗೆ ಮಾತುಕತೆ ನಡೆಸಿದ್ದು, ಪಕ್ಷದ ದೃಢ ನಿಲುವನ್ನು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

