ಈಗಿನ ಸುದ್ದಿ

ಡೀವಿ ದುಡ್ಡಿಗಾಗಿ ನನ್ನ ಬಳಿ ಕಣ್ಣೀರಿಟ್ಟಿದ್ದರು: ರೇಣು ಬಾಂಬ್

ಡೀವಿ ದುಡ್ಡಿಗಾಗಿ ನನ್ನ ಬಳಿ ಕಣ್ಣೀರಿಟ್ಟಿದ್ದರು: ರೇಣು ಬಾಂಬ್
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಹಣಕ್ಕಾಗಿ ನನ್ನ ಬಳಿ ಕಣ್ಣೀರಿಟ್ಟಿದ್ದರು ಎಂದು ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಮಂಗಳವಾರ ಹೊಸ ಬಾಂಬ್ ಸಿಡಿಸಿದ್ದಾರೆ.

ಇನ್ನು ಎರಡು ದಿನಗಳಲ್ಲಿ ಪಕ್ಷ ತೊರೆಯುವುದಾಗಿ ಹೇಳಿರುವ ಸಚಿವ ರೇಣುಕಾಚಾರ್ಯ ಅವರು, ಇಂದಿನಿಂದಲೇ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ದುಡ್ಡಿಗಾಗಿ ಕಣ್ಣೀರಿಟ್ಟಿದ್ದರು. ಅವರಿಗೆ ನಾನೇ ಹಣ ಕೊಟ್ಟಿದ್ದೇನೆ. ಈ ಬಗ್ಗೆ ನನ್ನ ಬಳಿ ಸೂಕ್ತ ದಾಖಲೆಗಳಿದ್ದು, ಇನ್ನೆರಡು ದಿನಗಳಲ್ಲಿ ಆ ದಾಖಲೆಗಳನ್ನು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಈ ಸಂಬಂಧ ತಾವು ಯಾವುದೇ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ, ಸದಾನಂದಗೌಡರೂ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಸದಾನಂದಗೌಡ ಅವರು ನನ್ನಿಂದ ಮಾತ್ರ ಹಣ ವಸೂಲಿ ಮಾಡಿಲ್ಲ, ಸಬ್‌ರಿಜಿಸ್ಟ್ರಾರ್‌ಗಳಿಂದಲೂ ಹಣ ವಸೂಲಿ ಮಾಡಿದ್ದಾರೆ. ಈ ಹಣವನ್ನು ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರಿಗೆ ನೀಡಿದ್ದಾರೆ ಮತ್ತು ಅವರು ಸೂಚಿಸಿದವರನ್ನು ವರ್ಗಾವಣೆ ಮಾಡಿದ್ದಾರೆ ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ.

ಇದೇ ವೇಳೆ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಜೋಶಿ ಕೇವಲ ರಬ್ಬರ್ ಸ್ಟಾಂಪ್ ಎಂದಿದ್ದಾರೆ. ಅಲ್ಲದೆ ಸಂಸದ ಅನಂತಕುಮಾರ್, ಸಂತೋಷ್ ಹಾಗೂ ಜೋಶಿ ಭಾರಿ ಭ್ರಷ್ಟರು ಎಂದು ಆರೋಪಿಸಿದ್ದಾರೆ.

ಕೆಲವು ಬಿಜೆಪಿ ನಾಯಕರ ಷಡ್ಯಂತ್ರದಿಂದಲೇ ನಾನು ಪಕ್ಷ ಬಿಡಬೇಕಾಗಿ ಬಂತು ಎಂದು ಅವರು ದೂರಿದ್ದಾರೆ.

ಬಿಜೆಪಿ ತೊರೆಯಲು ಮುಂದಾಗಿರುವ ರೇಣುಕಾಚಾರ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ನಾಯಕ, ಅವರ ವಿರುದ್ಧದ ಟೀಕೆಗಳನ್ನು ಸಹಿಸುವುದಿಲ್ಲ ಎಂದು ಹೇಳುವ ಮೂಲಕ ತಾವು ಕರ್ನಾಟಕ ಜನತಾ ಪಕ್ಷ ಸೇರುವುದನ್ನು ಖಚಿತ ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.