ದೆಹಲಿ ಫಾರ್ಮ್‌ಹೌಸ್‌ನಲ್ಲಿ ಗುಂಡಿನ ದಾಳಿ: ಬಿಎಸ್‌ಪಿ ಮುಖಂಡನ ಹತ್ಯೆ

ನವದೆಹಲಿ: ದೆಹಲಿಯ ಫಾರ್ಮ್‌ಹೌಸ್‌ನ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಫಾರ್ಮ್‌ಹೌಸ್‌ನ ಮಾಲೀಕ ಹಾಗೂ ಬಿಎಸ್‌ಪಿ ಮುಖಂಡ ದೀಪಕ್ ಭಾರದ್ವಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ದಕ್ಷಿಣ ದೆಹಲಿಯ ರಜೌಕರಿ ಬಳಿ ಇರುವ ಫಾರ್ಮ್‌ಗೆ ಕಪ್ಪು ಬಣ್ಣದ ಸ್ಕೋಡಾ ಕಾರ್‌ನಲ್ಲಿ ಆಗಮಿಸಿದ ಮೂವರು ಅಪರಿಚಿತ ವ್ಯಕ್ತಿಗಳು, ಮಾಲೀಕ್ ದೀಪಕ್ ಮೇಲೆ ಎರ್ರಾಬಿರ್ರಿ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ದೀಪಕ್ ಅವರು ಗುಂಡು ಹಾರಿಸಿದ್ದಾರೆ.
ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 600 ಕೋಟಿ ರುಪಾಯಿ ಆಸ್ತಿ ಹೊಂದಿರುವ ದೀಪಕ್ ಅವರ ಹತ್ಯೆಗೆ ಹಣಕಾಸಿನ ವೈಶಮ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ದೀಪಕ್ ಅವರು 2009ರ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


