ಈಗಿನ ಸುದ್ದಿ

ಗೋವಾ ಮಾಜಿ ಸಿಎಂ ವಿರುದ್ಧ ಎಫ್‌ಐಆರ್

Published On :

ಪಣಜಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಮಾಜಿ ಮುಖ್ಯಮಂತ್ರಿ ಸೇರಿದಂತೆ 151 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲು ಗೋವಾ ಸರ್ಕಾರ ಮಂಗಳವಾರ ನಿರ್ಧರಿಸಿದೆ.

ಗೋವಾದ ಮಾಜಿ ಮುಖ್ಯಮಂತ್ರಿ, ಮಾಜಿ ಗೃಹ ಮಂತ್ರಿ ಪುತ್ರ, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಅಧಿಕಾರಗಳ ವಿರುದ್ಧ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಿಸಲು ನಿರ್ಧರಿಸಿದೆ.

ಈ ಸಂಬಂಧ ಮಾತನಾಡಿದ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್, ನ್ಯಾಯಾಲಯದ ನಿದೇರ್ಶನದ ಮೇರೆಗೆ ಆರು ವಾರದೊಳಗೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ನ್ಯಾಯಾಮೂರ್ತಿ ಎಂ.ಬಿ ಶಾ ಆಯೋಗ ಸಲ್ಲಿಸಿರುವ ತನಿಖಾ ವರದಿಯಲ್ಲಿ ಹೆಸರಿಸಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕಾಶಿನಾಥ್ ಶೆಟ್ಟಿ ಎಂಬುವವರು ಅರ್ಜಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಗೋವದಲ್ಲಿರುವ ಬಾಂಬೆ ಹೈಕೋರ್ಟ್ ನ್ಯಾಯಪೀಠ, ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿತ್ತು.

ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸ್ತುತ ಪ್ರತಿಪಕ್ಷದ ನಾಯಕ ಪ್ರತಾಪ್ ಸಿಂಗ್ ರಾಣೆ, ಮಾಜಿ ಗಣಿಗಾರಿಕೆ ಮಂತ್ರಿ ದಿಗಂಬರ್ ಕಾಮತ್ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಕೋರ್ಟ್ ಗೋವಾ ಸರ್ಕಾರಕ್ಕೆ ನಿರ್ದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.