ಈಗಿನ ಸುದ್ದಿ

ಸ್ವಿಸ್ ಮಹಿಳೆ ಗ್ಯಾಂಗ್‌ರೇಪ್: 6 ಜನರ ವಿರುದ್ಧ ಚಾರ್ಜ್‌ಶೀಟ್

Published On :

ಡಾತಿಯಾ: ಸ್ವಿಸ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಆರು ಜನ ಆರೋಪಿಗಳ ವಿರುದ್ಧ ಪೊಲೀಸರು ಮಂಗಳವಾರ ಚಾರ್ಜ್‌ಶೀಟ್ ದಾಖಲಿಸಿದ್ದಾರೆ.

ಆಗ್ರಾ ಸಮೀಪದ ಅರಣ್ಯದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರು ಆರೋಪಿಗಳ ವಿರುದ್ಧ ಜಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಪೊಲೀಸರು ಆರೋಪಿಗಳ ಗುರುತಿಗಾಗಿ ಯಾವುದೇ ಪರೀಕ್ಷೆ ನಡೆಸದೇ ಚಾರ್ಜ್‌ಶೀಟ್ ಸಲ್ಲಿಸಿರುವ ಪ್ರಕರಣ ಇದೇ ಮೊದಲು.

ಆರೋಪಿಗಳ ವಿರುದ್ಧ ಕಳ್ಳತನ, ಅತ್ಯಾಚಾರ ಸೇರಿದಂತೆ 100ಪುಟಗಳನ್ನೊಳಗೊಂಡ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ತನಿಖಾ ಅಧಿಕಾರಿ ಎನ್.ಎಸ್. ರಾವತ್ ಹೇಳಿದ್ದಾರೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷಿಗಳಿವೆ. ಚಾರ್ಜ್‌ಶೀಟ್‌ನಲ್ಲಿ ಹೇಳಿರುವಂತಹ ದಾಖಲೆಗಳು ತಮ್ಮ ಬಳಿ ಇವೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಕರಣದ ವಿಚಾರಣೆ ಮಾರ್ಚ್ 30ರಿಂದ ಪ್ರಾರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

38ವರ್ಷದ ಸ್ವಿಜರ್‌ಲ್ಯಾಂಡ್ ಮಹಿಳೆ ಸೈಕಲಿನಲ್ಲಿ ತಮ್ಮ ಸಹಚರರೊಂದಿಗೆ ಪ್ರವಾಸ ಮುಗಿಸಿ ಆಗ್ರಾಗೆ ಹಿಂತುರಗಬೇಕಾದರೆ 12ಕ್ಕೂ ಹೆಚ್ಚು ಜನ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.