ಎನ್‌ಸಿಟಿಸಿ ರಚನೆಗೆ ಒಪ್ಪಿಗೆ ದೊರೆಯಲಿದೆ: ಶಿಂಧೆ
ನವದೆಹಲಿ: ರಾಷ್ಟ್ರೀಯ ಭಯೋತ್ಪಾದನ ನಿಗ್ರಹ ಕೇಂದ್ರ(ಎನ್‌ಸಿಟಿಸಿ) ರಚನೆಗೆ ಇನ್ನು ಮುಂದೆ ಯಾವುದೇ ವಿರೋಧ ವ್ಯ.ಕ್ತವಾಗುವುದಿಲ್ಲ ಎಂದು ಕೇಂದ್ರ ಗೃಹ ಮಂತ್ರಿ ಸುಶೀಲ್ ಕುಮಾರ್ ಶಿಂಧೆ ಗುರುವಾರ ಹೇಳಿದ್ದಾರೆ.
ಎನ್‌ಸಿಟಿಸಿಯಲ್ಲಿದ್ದ ಕೆಲವು ನಿಬಂಧನೆಗಳಿಗೆ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಆ ಅಂಶಗಳನ್ನು ತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಸಲಹೆಯನ್ನು ಪರಿಗಣಿಸಿರುವ ಸರ್ಕಾರ ಎನ್‌ಸಿಟಿಸಿಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಆದ್ದರಿಂದ 2013 ಏಪ್ರಿಲ್‌ನಲ್ಲಿ ನಡೆಯುವ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಎನ್‌ಸಿಟಿಸಿ ರಚನೆಗೆ ಒಪ್ಪಿಗೆ ದೊರೆಯಲಿದೆ ಎಂದು ಶಿಂಧೆ ಭರವಸೆ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನಾ ಸ್ಥಳೀಯ ಪೊಲೀಸರು ಬಂಧಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕೂಡ ಎನ್‌ಸಿಟಿಸಿ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ.
ಎನ್‌ಸಿಟಿಸಿ ರಚನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿರೋಧ ವ್ಯಕ್ತಪಡಿಸಿದ್ದರು.
ಎನ್‌ಸಿಟಿಸಿ ಜಾರಿಯಾಗಲಿದೆ ಆದರೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರೆ ಮಾತ್ರ ಎಂದ ಅವರು,ಈ ಸಂಬಂಧ ಕೆಲವೇ ದಿನಗಳಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಸುತ್ತೋಲೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

