ಕ್ರಿಕೆಟಿಗ ಜೆಸ್ಸಿ ರೈಡರ್ ಆರೋಗ್ಯ ಗಂಭೀರ
ಕ್ರಿಸ್ಟ್ಚರ್ಚ್: ತಲೆಗೆ ಏಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನ್ಯೂಜಿಲ್ಯಾಂಡ್ನ ಕ್ರಿಕೆಟಿಗ ಜೆಸ್ಸಿ ರೈಡರ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ. ಇಲ್ಲಿನ ಬಾರ್ವೊಂದರಲ್ಲಿ ನಡೆದ ಜಗಳದಲ್ಲಿ ಜೆಸ್ಸಿ ತಲೆಗೆ ಗಂಭೀರ ಏಟು ಬಿದ್ದಿತ್ತು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಸ್ಸಿ ಕೋಮಾ ಸ್ಥಿತಿಯಲ್ಲಿದ್ದಾರೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇಲ್ಲಿನ ಮರಿವೇಲ್ನಲ್ಲಿರುವ ಅಖಿಮನ್ ಬಾರ್ನಿಂದ ಹೊರ ಬರುತ್ತಿದ್ದ ವೇಳೆ ಮೂವರು ವ್ಯಕ್ತಿಗಳು ಜೆಸ್ಸಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕ್ರಿಸ್ಟ್ಚರ್ಚ್ ಪೊಲೀಸರು ಹೇಳಿದ್ದಾರೆ.
28ರ ಹರೆಯದ ಜೆಸ್ಸಿ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ.
ನ್ಯೂಜಿಲ್ಯಾಂಡ್ನಲ್ಲಿ ನಡೆದ ದೇಶೀಯ ಪಂದ್ಯವೊಂದರ ಸೆಮಿಫೈನಲ್ನಲ್ಲಿ ಸೋತಿದ್ದ ವೆಲ್ಲಿಂಗ್ಟನ್ ತಂಡದ ಸದಸ್ಯರೊಂದಿಗೆ ಜೆಸ್ಸಿ ಬಾರ್ನಿಂದ ಹಿಂತಿರುಗುತ್ತಿದ್ದ ವೇಳೆ ಮೊದಲ ಬಾರಿಗೆ ಹಲ್ಲೆ ನಡೆದಿದೆ.
ದುಷ್ಕರ್ಮಿಗಳು ಜೆಸ್ಸಿ ಅವರನ್ನೇ ಹಿಂಬಾಲಿಸಿದ್ದು, ಜತೆಗಿದ್ದ ಇಬ್ಬರು ತಂಡದ ಸದಸ್ಯರು ಹೋದ ಮೇಲೆ ಜೆಸ್ಸಿ ಮೇಲೆ ಎರಡನೇ ಬಾರಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆದಾಗ್ಯೂ, ಹಲ್ಲೆ ನಡೆಸಿದವರ್ಯಾರು? ಯಾಕೆ ನಡೆಸಿದರು? ಎಂಬುದರ ಬಗ್ಗೆ ನ್ಯೂಜಿಲ್ಯಾಂಡ್ನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

