ಈಗಿನ ಸುದ್ದಿ

ಕೇಂದ್ರದ ಅನುದಾನದಿಂದ ಗುಜರಾತ್ ಅಭಿವೃದ್ಧಿ: ಕಪಿಲ್ ಸಿಬಲ್

Published On :

ನವದೆಹಲಿ: ಕೇಂದ್ರ ಸರ್ಕಾರ ನೀಡಿರುವ ಅನುದಾನದಿಂದ ಗುಜರಾತ್‌ನಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ ಎಂದು ಕೇಂದ್ರ ಸಚಿವ ಕಪಿಲ್ ಸಿಬಲ್ ಶುಕ್ರವಾರ ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸರ್ಕಾರವನ್ನು ಖಂಡಿಸಿದ ಅವರು, ಆ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಾಕಷ್ಟು ಹಣ ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದಿದ್ದಾರೆ.

ಮೋದಿ ಹೆಸರು ಪ್ರಸ್ತಾಪಿಸದ ಕಪಿಲ್ ಸಿಬಲ್, ಯಾರೋ ಒಬ್ಬರು ರಾಜ್ಯದಲ್ಲಿ ಸತತ ಮೂರು ಬಾರಿ ಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ತಾವು ಪ್ರಧಾನಿ ಆಗಬಹುದು ಎಂದುಕೊಂಡಿದ್ದಾರೆ. ಆದರೆ ಮೂರು ಬಾರಿ ಅಧಿಕಾರಕ್ಕೆ ಬಂದವರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಕೇಂದ್ರ ಸರ್ಕಾರದ ಅನುದಾನದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ ಎಂದು ಟೀಕಿಸಿದ್ದಾರೆ.

ಮೋದಿ ಅವರನ್ನು ದೆಹಲಿ ಮುಖ್ಯಮಂತ್ರಿಗೆ ಹೋಲಿಸಿ ನೋಡಿದರೆ, ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರದೇ ಮೇಲುಗೈ. ದೀಕ್ಷಿತ್ ಅವರು ಸತತ ನಾಲ್ಕು ಬಾರಿ ಅಧಿಕಾರಕ್ಕೆ ಬಂದಿದ್ದಾರೆ. ಅಂದರೆ ಅವರು ತಮ್ಮ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಜನರೊಡನೆ ಬೆರೆತಿದ್ದಾರೆ. ಇಂತಹ ಅನೇಕ ರಾಜ್ಯದ ಮುಖ್ಯಮಂತ್ರಿಗಳಿದ್ದಾರೆ. ಹಾಗಾಗಿ ತಾವು ಮೂರು ಬಾರಿ ಗೆದ್ದ ಮಾತ್ರಕ್ಕೆ ಪ್ರಧಾನಿ ಆಗಬಹುದು ಎಂಬ ಕನಸು ಕಾಣಬಾರದು ಎಂದು ಸಿಬಲ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.