ಒಎಂಸಿ ಪ್ರಕರಣ: ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿಗೆ ಜಾಮೀನು
ಹೈದರಾಬಾದ್: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಶನಿವಾರ ಮಧ್ಯಂತರ ಜಾಮೀನು ನೀಡಿದೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಬ್ಬರ ಶ್ಯೂರಿಟಿ ಹಾಗೂ 2 ಲಕ್ಷ ರುಪಾಯಿ ಬಾಂಡ್ ಮೇಲೆ ಶ್ರೀಲಕ್ಷ್ಮೀ ಅವರಿಗೆ ನಾಂಪಲ್ಲಿ ಸಿಬಿಐ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇತ್ತೀಚಗಷ್ಟೇ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ ವಿಚಾರಣೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಕಳೆದ ನವೆಂಬರ್ನಲ್ಲಿ ಬಂಧನಕ್ಕೊಳಗಾಗಿದ್ದ ಶ್ರೀಲಕ್ಷ್ಮಿ ಅವರನ್ನು ಕ್ರಿಮಿನಲ್ ಸಂಚು, ಸರ್ಕಾರಿ ಅಧಿಕಾರಿಯ ನಂಬಿಕೆ ದ್ರೋಹ ಪ್ರಕರಣದಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ಈ ಹಿಂದೆ ಅವಕಾಶ ನೀಡಿತ್ತು. ಆದರೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆ ನಡೆಸಲು ಸಿಬಿಐಗೆ ಅನುಮತಿ ಸಿಕ್ಕಿರಲಿಲ್ಲ. ಪ್ರಕರಣ ಸಂಬಂಧ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

