ಈಗಿನ ಸುದ್ದಿ

ಸಂಸದೀಯ ಮಂಡಳಿಗೆ ಮೋದಿ, ಉಪಾಧ್ಯಕ್ಷ ಸ್ಥಾನಕ್ಕೆ ಡೀವಿ ನೇಮಕ

ಸಂಸದೀಯ ಮಂಡಳಿಗೆ ಮೋದಿ, ಉಪಾಧ್ಯಕ್ಷ ಸ್ಥಾನಕ್ಕೆ ಡೀವಿ ನೇಮಕ
Published On :

ನವದೆಹಲಿ: ಹ್ಯಾಟ್ರಿಕ್ ಗೆಲುವು ಸಾಧಿಸಿದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದ್ದು, ಮುಂದಿನ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದ ಅವರ ದೆಹಲಿ ಹಾದಿ ಈಗ ಮತ್ತಷ್ಟು ಸುಗಮವಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು 2014ರ ಲೋಕಸಭಾ ಚುನಾವಣೆಗಾಗಿ ಭಾನುವಾರ ಹೊಸ ತಂಡವನ್ನು ಪ್ರಕಟಸಿದ್ದಾರೆ. 12 ಸದಸ್ಯರನ್ನು ಒಳಗೊಂಡ ಸಂಸದೀಯ ಮಂಡಳಿಗೆ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ್ದು, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ ಹಾಗೂ ಉಮಾ ಭಾರತಿ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದಾರೆ.

ಮೋದಿ ಅವರ ಆಪ್ತ ಹಾಗೂ ಮಾಜಿ ಸಚಿವ ಅಮಿತ್ ಶಾ, ರಾಜೀವ್ ಪ್ರತಾಪ್ ರೂಡಿ ಮತ್ತು ಸಂಸದ ವರುಣ್ ಗಾಂಧಿ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

ನಿರೀಕ್ಷೆಯಂತೆ ಡಿ.ವಿ.ಸದಾನಂದಗೌಡ ಅವರು ರಾಷ್ಟ್ರೀಯ ರಾಜಕಾರಣಕ್ಕೆ ತೆರಳಿದ್ದಾರೆ. ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಸಂಸದ ಅನಂತ್‌ಕುಮಾರ್ ಅವರು ಪಕ್ಷದ ಪ್ರಧಾನಕಾರ್ಯದರ್ಶಿಯಾಗಿ ಮುಂದುವರೆಯಲಿದ್ದಾರೆ.

ರಾಜನಾಥ್ ಸಿಂಗ್ ಅವರ ಹೊಸ ತಂಡ 12 ಉಪಾಧ್ಯಕ್ಷರನ್ನು, 10 ಪ್ರಧಾನ ಕಾರ್ಯಕಾರ್ಯದರ್ಶಿಗಳು, 15 ಕಾರ್ಯದರ್ಶಿಗಳು ಮತ್ತು ಏಳು ವಕ್ತಾರರನ್ನು ಹೊಂದಿದೆ. ಅಲ್ಲದೆ 12 ಸದಸ್ಯರ ಸಂಸದೀಯ ಮಂಡಳಿ, 19 ಸದಸ್ಯರ ಕೇಂದ್ರ ಚುನಾವಣಾ ಸಮಿತಿ ಹಾಗೂ ಐವರು ಸದಸ್ಯರನ್ನೊಳಗೊಂಡ ಕೇಂದ್ರ ಶಿಸ್ತು ಸಮಿತಿ ಇದೆ.

ರಾಜನಾಥ್ ಸಿಂಗ್(ಅಧ್ಯಕ್ಷ), ಅಟಲ್ ಬಿಹಾರಿ ವಾಜಪಾಯಿ, ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಶಿ, ಎಂ.ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನರೇಂದ್ರ ಮೋದಿ, ಅನಂತ್‌ಕುಮಾರ್, ಥಾವರ್‌ಚಂದ್ ಗೆಹ್ಲೊಟ್ ರಾಮ್ ಲಾಲ್ ಅವರು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.