ಈಗಿನ ಸುದ್ದಿ

ಏ.2 ಅಥವಾ 3ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಪರಮೇಶ್ವರ

ಏ.2 ಅಥವಾ 3ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಪರಮೇಶ್ವರ
Published On :

ನವದೆಹಲಿ: ಏಪ್ರಿಲ್ 2 ಅಥವಾ 3ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಾಂಗ್ರೆಸ್ ದೆಹಲಿಯಲ್ಲಿ ಕಸರತ್ತು ನಡೆಸುತ್ತಿದ್ದು, ಹಲವು ಸುತ್ತಿನ ಸಭೆಗಳ ಬಳಿಕ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ.

ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂಕಿತ ಹಾಕಿದ ನಂತರ, ಏಪ್ರಿಲ್ 2 ಅಥವಾ 3ರಂದು ಪಟ್ಟಿ ಬಿಡುಗಡೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.

ಇಂದು ಸೋನಿಯಾ ಗಾಂಧಿ ಅವರು ಎಸ್.ಎಂ. ಕೃಷ್ಣ, ಮಲ್ಲಿಕಾರ್ಜುನ ಖರ್ಗೆ ಮತ್ತು ವೀರಪ್ಪ ಮೊಯ್ಲಿ ಅವರೊಂದಿಗೆ ಚರ್ಚಿಸಿ ಪಟ್ಟಿಗೆ ಒಪ್ಪಿಗೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಖಚಿತ ಎಂದು  ಪರಮೇಶ್ವರ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.