ಈಗಿನ ಸುದ್ದಿ

ಪ.ಬಂಗಾಳ ಸರ್ಕಾರದ ವಿರುದ್ಧ 'ಹೈ' ಮೆಟ್ಟಿಲೇರಿದ ಆಯೋಗ

Published On :

ಕೊಲ್ಕತಾ: ರಾಜ್ಯ ಸರ್ಕಾರ ಘೋಷಿಸಿರುವ ಪಂಚಾಯತ್ ಚುನಾವಣೆ ದಿನಾಂಕವನ್ನು ವಜಾಗೊಳಿಸುವಂತೆ ಕೋರಿ ಪಶ್ಚಿಮ ಬಂಗಾಳದ ಚುನಾವಣಾ ಆಯೋಗ ಹೈಕೋರ್ಟ್ನಲ್ಲಿ ಸೋಮವಾರ ಅರ್ಜಿ ಸಲ್ಲಿಸಿದೆ.

ನ್ಯಾಯಾಮೂರ್ತಿ ಬಿಸ್ವಂತ್ ಸಮಾಧರ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಆಯೋಗವು ಅರ್ಜಿ ಸಲ್ಲಿಸಿದೆ.

ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಮತ್ತು ಚುನಾವಣೆ ಆಯೋಗದ ನಡುವಿನ ಜಟಾಪಟಿ ತೀವ್ರಗೊಂಡಿದೆ. ಪಂಚಾಯತ್ ಚುನಾವಣೆ ದಿನಾಂಕ ಸಂಬಂಧ ರಾಜ್ಯ ಸರ್ಕಾರ ಮತ್ತು ಚುನಾವಣೆ ಆಯೋಗದ ನಡುವೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಪ್ರಕರಣ ಈಗ ಹೈಕೋರ್ಟ್ ಮೆಟ್ಟಿಲೇರಿದೆ.

ರಾಜ್ಯ ಸರ್ಕಾರದ ಪೊಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಏಪ್ರಿಲ್ 26 ಮತ್ತು 30ರಂದು ರಾಜ್ಯದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ ಎಂದು ದೀದಿ ಸರ್ಕಾರ ಹೇಳಿತ್ತು. ಆದರೆ ಆಯೋಗ 3 ಹಂತದ ಚುನಾವಣೆ ಒಲವು ತೋರಿದ್ದು, ಈ ಸಂಬಂಧ ಭದ್ರತೆಗಾಗಿ 800 ಅರೆ ಸೇನಾಪಡೆ ತುಕಡಿಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ರಾಜ್ಯ ಸರ್ಕಾರ ನೆರೆ ರಾಜ್ಯಗಳಿಂದ ಪೊಲೀಸರ ನೆರೆವು ಪಡೆದುಕೊಳ್ಳವುದಾಗಿ ತಿಳಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.