ಮಲ್ಲಿಕ್ ಉಪವಾಸ ಸತ್ಯಾಗ್ರಹಕ್ಕೆ ಅನುಮತಿ ಇಲ್ಲ
ನವದೆಹಲಿ: ಸಂಸತ್ ದಾಳಿ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಫ್ಜಲ್ ಗುರು ಮೃತದೇಹವನ್ನು ಅವರ ಕುಟುಂಬವರ್ಗಕ್ಕೆ ನೀಡಬೇಕು ಹಾಗೂ ಕಾಶ್ಮೀರಕ್ಕೆ ಸಂಬಂಧಪಟ್ಟಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಉಪವಾಸ ಸತ್ಯಾಗ್ರಹ ನಡೆಸಲು ಕಾಶ್ಮೀರ ಪ್ರತೇಕತಾವಾದಿ ಸಂಘದ ನಾಯಕ ಯಾಸಿನ್ ಮಲ್ಲಿಕ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಮೇ 3ರಂದು 48 ಗಂಟೆಗಳ ನಿರಂತರ ಉಪವಾಸ ಸತ್ಯಾಗ್ರಹ ನಡೆಸಲು ಅವಕಾಶ ನೀಡುವಂತೆ ಯಾಸಿನ್ ಮಲ್ಲಿಕ್ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಕಮಿಷನರ್ ನೀರಜ್ ಕುಮಾರ್ ಅವರು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂದು ಕಾರಣ ನೀಡಿ ಅನುಮತಿಯನ್ನು ನಿರಾಕರಿಸಿದ್ದಾಗಿ ತಿಳಿಸಿದ್ದಾರೆ.
ಉಪವಾಸ ಸತ್ಯಾಗ್ರಹದ ಅನುಮತಿಗೆ ಸಂಬಂಧಿಸಿದಂತೆ ಭದ್ರತಾ ಸಂಸ್ಥೆ ಕೇಂದ್ರ ಗೃಹ ಇಲಾಖೆಗೆ ವರದಿ ನೀಡಿದ್ದು, ಯಾಸಿನ್ ಮಲ್ಲಿಕ್ರಿಗೆ ಉಪವಾಸ ಸತ್ಯಾಗ್ರಹ ನಡೆಸಲು ಅವಕಾಶ ನೀಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಮಲ್ಲಿಕ್ ರಾಷ್ಟ್ರದ್ರೋಹಿ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವುದಾಗಿ ವರದಿಯಲ್ಲಿ ಉಲ್ಲೇಖಿಸಿದ್ದು, ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯಬಹುದು ಎಂಬ ಕಾರಣಕ್ಕಾಗಿಯೇ ಅನುಮತಿ ನಿರಾಕರಿಸಿರುವುದಾಗಿ ನೀರಜ್ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

