ಗಡಿ ಅತಿಕ್ರಮಣ: ಬಿಜೆಪಿ ನಾಯಕರಿಂದ ರಾಷ್ಟ್ರಪತಿ ಭೇಟಿ

ನವದೆಹಲಿ: ಚೀನಾ ಗಡಿ ಅತಿಕ್ರಮಣ ಹಾಗು ಸರಬ್ಜಿತ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ದಿನೇ ದಿನೇ ಗಂಭೀರವಾಗುತ್ತಿರುವ ಚೀನಾ ಯೋಧರ ಗಡಿ ಅತಿಕ್ರಮಣ ವಿಚಾರ ಮತ್ತು ಸರಬ್ದಿತ್ ಹತ್ಯೆ ಪ್ರಕರಣದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೂಡಲೆ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಪರಿಷ್ಕರಿಸಲು ಮುಂದಾಗಬೇಕು ಎಂದು ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಅವರು ಮನವಿ ಮಾಡಿದ್ದಾರೆ.
ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ಮಾತನಾಡಿದ ಅಡ್ವಾಣಿ ಅವರು, ರಾಷ್ಟ್ರಪತಿಗಳು ತಟಸ್ಥ ನೀತಿಯನ್ನು ಬಿಟ್ಟು ಸಮಸ್ಯೆಯ ಗಂಭೀರತೆಯನ್ನು ಅರಿತು ಕೂಡಲೆ ಮಧ್ಯಸ್ಥಿಕೆ ವಹಿಸಿ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಬೇಕು ಎಂದು ಮನವಿ ಮಾಡಿದ್ದಾರೆ.
ರಾಷ್ಟ್ರಪತಿ ಭೇಟಿಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರಬ್ಜಿತ್ ಸಾವಿಗೂ ಮುನ್ನ ತನ್ನ ಜೀವಕ್ಕೆ ತೊಂದರೆ ಇದೆ ಎಂದು ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದ, ಆದರೆ ಸರ್ಕಾರ ಅವನ ಬಗ್ಗೆ ಯೋಚಿಸುವಷ್ಟು ತಾಳ್ಮೆ ಕೂಡ ತೋರಲಿಲ್ಲ ಇದರಿಂದ ಈ ಅನಾಹುತ ಸಂಭವಿಸಿದೆ ಎಂದು ಅಡ್ವಾಣಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇಂದು ಮಧ್ಯಾಹ್ನ ಬಿಜೆಪಿಯ ಮುಖ್ಯಸ್ಥ ಎಲ್.ಕೆ. ಅಡ್ವಾಣಿ, ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ಬಿಜೆಪಿ ರಾಜ್ಯಾಧ್ಯಕ್ಷ ರಾಜ್ನಾಥ್ ಸಿಂಗ್ ಹಾಗು ಅರುಣ್ ಜೇಟ್ಲಿ ಸೇರಿದಂತೆ ಲೋಕಸಭಾ ಹಾಗು ರಾಜ್ಯಸಭೆಯ ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


