ಪಂಚಭೂತಗಳಲ್ಲಿ ಸರಬ್ಜಿತ್ ಲೀನ

ಅಮೃತ್ಸರ್: ಸಹ ಕೈದಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿದ್ದ ಭಾರತೀಯ ಕೈದಿ ಸರಬ್ಜಿತ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಪಂಜಾಬ್ನ ಭಿಕಿವಿಂಡ್ ಗ್ರಾಮದಲ್ಲಿ ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು.
ಸರಬ್ಜಿತ್ರ ಹುಟ್ಟುರಾದ ಪಂಜಾಬ್ನ ಭಿಕಿವಿಂಡ್ ಗ್ರಾಮದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಂಜಾಬ್ನ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಸರ್ಕಾರಿ ಗೌರವಗಳೊಂದಿಗೆ ಸರಬ್ಜಿತ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸರಬ್ಜಿತ್ ಸಿಂಗ್ರ ಸಹೋದರಿ ದಲ್ಬೀರ್ ಕೌರ್ ಅವರು ಅಂತಿಮ ವಿದಿವಿಧಾನಗಳನ್ನು ನೇರವೇರಿಸಿದರು. ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರವನ್ನು ಸಾರ್ವಜನಿಕ ವೀಕ್ಷಣೆಗಾಗಿ ಸ್ಥಳೀಯ ಶಾಲೆಯೊಂದರಲ್ಲಿ ಇಡಲಾಗಿತ್ತು.
ಕೇಂದ್ರ ಸರ್ಕಾರ ಸರಬ್ಜಿತ್ ಸಿಂಗ್ ಅವರ ಕುಟುಂಬಕ್ಕೆ ಪ್ರಧಾನಿ ಪುನರ್ವಸತಿ ನಿಧಿಯಿಂದ 25 ಲಕ್ಷ ರು. ಪರಿಹಾರ ಮೊತ್ತ ಪ್ರಧಾನಿ ಮನ್ಮೋಹನ್ ಸಿಂಗ್ ಘೋಷಿಸಿದ್ದರು. ಅಂತೆಯೇ ಪಂಜಾಬ್ ಸರ್ಕಾರ ಕೂಡ ಸರಬ್ಜಿತ್ರ ಕುಟುಂಬ ವರ್ಗಕ್ಕೆ 1 ಕೋಟಿ ರು. ನೀಡುವುದಾಗಿ ಘೋಷಿಸಿದೆ.
ಪಾಕಿಸ್ತಾನದ ಜೈಲಿನಲ್ಲಿ ಸಹ ಕೈದಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿದ್ದ ಸರಬ್ಜಿತ್ ಸಿಂಗ್, ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಭಾರತೀಯ ಕೈದಿ ಸರಬ್ಜಿತ್ ಸಿಂಗ್ರ ಮೃತದೇಹವನ್ನು ವಿಶೇಷ ವಿಮಾನದಲ್ಲಿ ಲಾಹೋರ್ನಿಂದ ಅಮೃತಸರಕ್ಕೆ ತರಲಾಗಿತ್ತು. ಸರಬ್ಜಿತ್ ಸಿಂಗ್ರ ಪಾರ್ಥಿವ ಶರೀರವನ್ನು ಅವರ ಕುಟುಂಬ ವರ್ಗಕ್ಕೆ ಹಸ್ತಾಂತರಿಸುವ ಮುನ್ನ ಸರಬ್ಜಿತ್ ಸಿಂಗ್ ಸಾವಿಗೆ ನಿಖರ ಕಾರಣ ತಿಳಿಯುವ ಸಲುವಾಗಿ ಅಮೃತಸರ್ನ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ಬಾರಿಗೆ ಶವ ಪರೀಕ್ಷೆ ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


