ರಸ್ತೆ ಅಪಘಾತ: ಲಾಲೂಗೆ ತೀವ್ರ ಗಾಯ

ಪಾಟ್ನಾ: ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಕಾರು ವಿಲಕ್ಷಣ ರೀತಿಯಲ್ಲಿ ಅಪಘಾತಕ್ಕಿಡಾಗಿದ್ದು, ಲಾಲೂ ಅವರ ತಲೆ ಹಾಗೂ ಮುಖಕ್ಕೆ ತೀವ್ರ ಗಾಯಗಳಾಗಿವೆ.
ಕಾರ್ಯನಿಮಿತ್ತ ವೈಶಾಲಿ ಜಿಲ್ಲೆಗೆ ಲಾಲೂ ಅವರು ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನ ಚಾಲಕ ತುರ್ತಾಗಿ ಬ್ರೇಕ್ ಹಾಕಿದ್ದಾನೆ. ಆ ಸಂದರ್ಭದಲ್ಲಿ ಕಾರಿನ ಗ್ಲಾಸ್ ಓಡೆದಿದ್ದರಿಂದ ಕಾರಿನ ಮುಂದಿನ ಸೀಟಿನಲ್ಲಿ ಕೂತಿದ್ದ ಲಾಲೂ ಪ್ರಸಾದ್ ಅವರ ಮುಖಕ್ಕೆ ಗ್ಲಾಸ್ ತಾಗಿ ತಲೆ ಹಾಗೂ ಮುಖಕ್ಕೆ ಗಾಯಗಳಾಗಿದೆ. ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಅವರ ಆಪ್ತ ಸಹಾಯಕ ಹೇಳಿದ್ದಾರೆ.
ಲಾಲೂ ಅವರ ತಲೆಗೆ ಪೆಟ್ಟಾಗಿದ್ದರಿಂದ ಎರಡು ಹೊಲಿಗೆ ಹಾಕಲಾಗಿದೆ. ಪ್ರಥಮ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಿರುವ ವೈದ್ಯರು, ಲಾಲೂ ಅವರ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.
ರಾಘೊಪುರ್ನ ಖಚ್ಚಿ ದರ್ಗಾ ಬಳಿಯ ಮೇಲ್ಸೆತುವೆ ಮೇಲೆ ರಾತ್ರಿ 10ರ ಸಮಯದಲ್ಲಿ ಲಾಲೂ ಅವರು ಕಾರು ಚಲಿಸುತ್ತಿದ್ದ ವೇಳೆ ಚಾಲಕ ತುರ್ತಾಗಿ ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ ಕಾರಿನ ಕಿಟಕಿ ಗಾಜು ಹೊಡೆದಿದ್ದು, ಗ್ಲಾಸ್ ತಾಗಿ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


