ವಿಧಾನಸಭೆ ಚುನಾವಣೆ: ಘಟಾನುಘಟಿಗಳಿಂದ ಮತದಾನ
ಬೆಂಗಳೂರು: ಕರ್ನಾಟಕ ವಿಧಾನಸಭೆಗಾಗಿ ಭಾನುವಾರ ಆರಂಭಗೊಂಡಿರುವ ಮತದಾನ ಪ್ರಕ್ರಿಯೆ ಬಿರುಸುಗೊಂಡಿದ್ದು, ಘಟಾನುಘಟಿ ನಾಯಕರುಗಳು ಮತ್ತು ಚಿತ್ರತಾರೆಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮ್ಮ ಪತ್ನಿ ಸಮೇತರಾಗಿ ಹುಬ್ಬಳ್ಳಿಯ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಅಂತೆಯೇ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು ತಮ್ಮ ಪತ್ನಿ ಡಾಟಿ ಮತ್ತು ತಮ್ಮ ಪುತ್ರರೊಂದಿಗೆ ಪುತ್ತೂರು ಕ್ಷೇತ್ರದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಅಂತೆಯೇ ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ , ಪುತ್ರ ರೇವಣ್ಣ ಅವರು ಹಾಸನ ಕ್ಷೇತ್ರಕ್ಕೆ ತೆರಳಿ ಮತದಾನ ಮಾಡಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಪತ್ನಿ ಅನಿತಾ ಅವರೊಂದಿಗೆ ತೆರಳಿ ರಾಮನಗರ ಮತಗಟ್ಟೆಯಿಂದ ಮತ ಚಲಾಯಿಸಿದರು.
ಅಂತೆಯೇ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಮೈಸೂರಿನ ವರುಣಾ ಕ್ಷೇತ್ರದಲ್ಲಿ, ಮಾಜಿ ಮುಖ್ಯಮಂತ್ರಿ ಮತ್ತು ಕೆಜೆರಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿವೈ ರಾಘವೇಂದ್ರ ಅವರು ಶಿಕಾರಿಪುರದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ತೆರದಾಳ ಕ್ಷೇತ್ರದ ಅಭ್ಯರ್ಥಿಯಾಗಿರುವ ನಟಿ ಉಮಾಶ್ರಿ ಅವರು ತಮ್ಮ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.
ಮತದಾನ ಮಾಡಿದ ತಾರೆಯರು
ಇತ್ತ ಚಿತ್ರತಾರೆಯರೂ ಸಹ ಮತಗಟ್ಟೆಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಕತ್ರಿಗುಪ್ಪೆಯ ಮತಗಟ್ಟೆಯಲ್ಲಿ ನಟ ಉಪೇಂದ್ರ ಮತ್ತು ಪ್ರಿಯಾಂಕ, ಅಂತೆಯೇ ನಟ ಗಣೇಶ್ ಮತ್ತು ಅವರ ಪತ್ನಿ ಶಿಲ್ಪಾ ಗಣೇಶ್ ಅವರು ಮತದಾನ ಮಾಡಿದ್ದಾರೆ. ಅಂತೆಯೇ ಸದಾಶಿವ ನಗರದ ಮತಗಟ್ಟೆಯಲ್ಲಿ ಡಾ.ರಾಜ್ ಕುಟುಂಬ ಸದಸ್ಯರು ಮತದಾನ ಮಾಡಿದ್ದಾರೆ. ನಟ ರಾಘವೇಂದ್ರ ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಮತದಾನ ಮಾಡಿದ್ದಾರೆ.
ಬ್ಯಾಟರಾಯನಪುರ ಮತಗಟ್ಟೆಯಲ್ಲಿ ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮತದಾನ ಮಾಡಿದ್ದಾರೆ. ಅಂತೆಯೇ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದ ನಟಿ ರಮ್ಯಾ ಅವರು ಶಾಂತಿನಗರ ಮತಗಟ್ಟೆಯಲ್ಲಿ ಮತದಾನ ಮಾಡುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಮತಗಟ್ಟೆಯ ಆವರಣದಲ್ಲಿ ಮತದಾನ ಮಾಡುವಾಗ ಅವರು ಮೊಬೈಲ್ನಲ್ಲಿ ಮಾತನಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

