ರಾಯಚೂರು: 3 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ
ರಾಯಚೂರು: ಲಿಂಗಸುಗೂರು ತಾಲೂಕಿನ 3 ಗ್ರಾಮಗಳಲ್ಲಿ ಮತದಾನವನ್ನೇ ಬಹಿಷ್ಕರಿಸಿರುವ ಘಟನೆ ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಗ್ರಾಮಗಳಾದ ಸರ್ಜಾಪುರ, ಕುಪ್ಪಿಗಡ್ಡ, ಅಮರಾವತಿ ಗ್ರಾಮದ ಮುಖ್ಯಸ್ಥರು ಮತದಾನವನ್ನು ಬಹಿಷ್ಕರಿಸಿರುವ ಕುರಿತು ಮಾಹಿತಿ ನೀಡಿದ್ದಾರೆ.
ತಮ್ಮ ತಮ್ಮ ಗ್ರಾಮಗಳನ್ನು ಮಸ್ಕಿ ತಾಲೂಕಿಗೆ ಸೇರಿಸುವ ಜಿಲ್ಲಾಡಳಿತದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದುವರೆಗೂ ಆರಿಸಿ ಬಂದಿರುವ ಯಾವುದೇ ಒಬ್ಬ ಶಾಸಕನೂ ತಮ್ಮ ಗ್ರಾಮಗಳ ಸಮಸ್ಯೆಯನ್ನು ಈಡೇರಿಸಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದೇವೆ ಆದರೆ ಯಾರೂ ಕೂಡ ಈ ಬಗ್ಗೆ ಗಂಭೀರವಾಗಿ ಪ್ರತಿಕ್ರಿಯಿಸುತಿಲ್ಲ ಹೀಗಾಗಿ ನಾವು ಮತದಾನವನ್ನು ಬಹಿಷ್ಕರಿಸಿದ್ದೇವೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ.
ಈ ಮೂರು ಗ್ರಾಮಗಳನ್ನು ಮಸ್ಕಿ ತಾಲೂಕಿಗೆ ಸೇರಿಸಬಾರದು ಮತ್ತು ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಹೀಗಾಗಿಯೇ ತಾವು ಮತದಾನ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

