ಈಗಿನ ಸುದ್ದಿ

ಸಜ್ಜನ್ ನಿರ್ಧೋಷಿ: ದೆಹಲಿಯಲ್ಲಿ ಸಾವಿರಾರು ಸಿಖ್ಖರ ಪ್ರತಿಭಟನೆ

ಸಜ್ಜನ್ ನಿರ್ಧೋಷಿ: ದೆಹಲಿಯಲ್ಲಿ ಸಾವಿರಾರು ಸಿಖ್ಖರ ಪ್ರತಿಭಟನೆ
Published On :

ನವದೆಹಲಿ: 1984ರ ಸಿಖ್ಖ್ ನರಮೇಧ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ನಿರ್ಧೋಷಿ ಎಂದು ಪ್ರಕಟಿಸಿದ ನ್ಯಾಯಾಲಯದ ಆದೇಶದ ವಿರುದ್ಧ ಸಿಖ್ಖ್ ಧರ್ಮೀಯರು ನಡೆಸುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವೆರೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಶಿರೋಮಣಿ ಅಕಾಲಿದಳ ಕರೆಕೊಟ್ಟಿದ್ದ ಪ್ರತಿಭಟನೆಗೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡುತ್ತಿದ್ದು, ಪ್ರತಿಭಟನಾಕಾರರು ಪ್ರಧಾನಿ ನಿವಾಸದತ್ತ ಧಾವಿಸುತ್ತಿದ್ದಾರೆ. 1984ರ ಸಿಖ್ಖ್ ನರಮೇಧ ಪ್ರಕರಣವನ್ನು ಪುನಃ ತನಿಖೆಗೊಳಪಡಿಸಬೇಕು ಮತ್ತು ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್‌ಐಟಿ)ವನ್ನು ರಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.

ಪ್ರತಿಭಟನಾ ನಿರತರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಲಘು ಲಾಠಿ ಪ್ರಹಾರ ಮತ್ತು ಜಲಫಿರಂಗಿಗಳನ್ನು ಬಳಸುತ್ತಿದ್ದಾರೆ. ಅದನ್ನೂ ಧಿಕ್ಕರಿಸಿ ಪ್ರತಿಭಟನಾಕಾರರು ಮುನ್ನುಗ್ಗುತ್ತಿದ್ದು, ಪ್ರಧಾನಿ ನಿವಾಸದ ಬಳಿ ಅಳವಡಿಸಲಾಗಿದ್ದ ಹತ್ತಾರು ಬ್ಯಾರಿಕೇಡ್‌ಗಳು ಪ್ರತಿಭಟನೆಯಿಂದಾಗಿ ಮುರಿದು ಹೋಗಿವೆ. ಉದ್ರಿಕ್ತ ಪ್ರತಿಭಟನಾಕಾರರು ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾಗಾಂಧಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

1984ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ಪ್ರತೀಕವಾಗಿ ನಡೆದ ಸಿಖ್ಖ್ ನರಮೇಧ ಪ್ರಕರಣ ಸಿಖ್ಖರ ಪಾಲಿಗೆ ಕರಾಳ ಅಧ್ಯಾಯವಾಗಿದೆ. ಪ್ರಕರಣದ ಕುರಿತು ಇತ್ತೀಚೆಗೆ ದೆಹಲಿಯ ಕಾರ್ಕರ್ ಡುಮಾ ನ್ಯಾಯಾಲಯ ನೀಡಿದ ತೀರ್ಪು ಸಿಖ್ಖ್ ಧರ್ಮೀಯರ ಕೆಂಗಣ್ಣಿಗೆ ಗುರಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.