ಈಗಿನ ಸುದ್ದಿ

ಕಲ್ಲಿದ್ದಲು ಹಗರಣ: ಸಿಬಿಐಯಿಂದ ಸುಪ್ರೀಂಗೆ ಹೊಸ ಅಫಿಡವಿಟ್ ಸಲ್ಲಿಕೆ

ಕಲ್ಲಿದ್ದಲು ಹಗರಣ: ಸಿಬಿಐಯಿಂದ ಸುಪ್ರೀಂಗೆ ಹೊಸ ಅಫಿಡವಿಟ್ ಸಲ್ಲಿಕೆ
Published On :

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ತನಿಖಾ ಪ್ರಗತಿ ವರದಿ ಸಂಬಂಧ ಸಿಬಿಐ ಸೋಮವಾರ ಸುಪ್ರೀಂ ಕೋರ್ಟ್‌ಗೆ ಹೊಸ ಅಫಿಡವಿಟ್ ಸಲ್ಲಿಸಿದೆ.

ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ಅವರು ಇಂದು 9 ಪುಟಗಳ ಹೊಸ ಅಫಿಡವಿಟ್ ಸಲ್ಲಿಸಿದ್ದು, ಇದರಲ್ಲಿ ಕೇಂದ್ರ ಕಾನೂನು ಸಚಿವರು ಹಾಗೂ ಪ್ರಧಾನ ಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ತನಿಖಾ ವರದಿಯ ಕರಡು ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಸುವ ಮುನ್ನ ಅದರಲ್ಲಿ ಕೆಲವು ತಿದ್ದುಪಡಿ ಮಾಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ.

ಆದರೆ ಸಿಬಿಐ ಈ ಮುಂಚೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ, ಕಾನೂನು ಸಚಿವರೊಂದಿಗೆ ಮತ್ತು ಅಟರ್ನಿ ಜನರಲ್ ಜಿಇ.ವಹನ್ವತಿ ಅವರೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಆದರೆ ವರದಿಯಲ್ಲಿ ಯಾವುದೇ ತಿದ್ದುಪಡಿ ಮಾಡಿಲ್ಲ ಎಂದು ಹೇಳಿತ್ತು. ಇದೀಗ ಕಾನೂನು ಸಚಿವ ಅಶ್ವನಿ ಕುಮಾರ್ ಅವರು ವರದಿಯಲ್ಲಿ ಕೆಲವು ತಿದ್ದುಪಡಿ ಮಾಡಿದ್ದು ನಿಜ ಎಂದು ಸಿಬಿಐ ಒಪ್ಪಿಕೊಂಡಿದೆ.

ಇಂದು ಸಿಬಿಐ ಸಲ್ಲಿಸಿರುವ ಅಫಿಡವಿಟ್‌ನ್ನು ಸುಪ್ರೀಂ ಕೋರ್ಟ್ ಮೇ 8ರಂದು ವಿಚಾರಣೆ ನಡೆಸಲಿದ್ದು, ಈ ವೇಳೆ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದೇಯಾದರೆ, ಅಶ್ವನಿ ಕುಮಾರ್ ತಲೆದಂಡವಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.