ಈಗಿನ ಸುದ್ದಿ

ಸಿಎಂ ರೇಸ್‌ನಲ್ಲಿ 10 ನಾಯಕರಿದ್ದಾರೆ: ಪರಮೇಶ್ವರ

ಸಿಎಂ ರೇಸ್‌ನಲ್ಲಿ 10 ನಾಯಕರಿದ್ದಾರೆ: ಪರಮೇಶ್ವರ
Published On :

ಬೆಂಗಳೂರು: ಹಲವು ಮಾಧ್ಯಮಗಳ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಸರಳ ಬಹುಮತ ಪಡೆಯುತ್ತದೆ ಎಂಬ ಸಂಗತಿ ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಗದ್ದುಗೆಗಾಗಿ ತೀವ್ರ ಪೈಪೊಟಿ ಆರಂಭವಾಗಿದೆ.

ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲಿ ನಾನೂ ಇದ್ದೇನೆ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, ತಾವೂ ಸೇರಿದಂತೆ ಸಿಎಂ ರೇಸ್‌ನಲ್ಲಿ 10ಕ್ಕು ಹೆಚ್ಚು ನಾಯಕರಿದ್ದಾರೆ. ಆದರೆ ಸಿಎಂ ಆಯ್ಕೆ ವೇಳೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರಿಗೆ ಆದ್ಯತೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾನು ಕಳೆದ ಎರಡು ವರ್ಷಗಳಿಂದ ಸತತ ಪ್ರಯತ್ನ ಪಟ್ಟಿದ್ದೇನೆ. ಸಿಎಂ ಆಯ್ಕೆ ವಿಚಾರದಲ್ಲಿ ವರಿಷ್ಠರ ತೀರ್ಮಾನದ ಬಗ್ಗೆ ಕಾದು ನೋಡೋಣ ಎಂದಿರುವ ಪರಮೇಶ್ವರ, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳಿದ್ದಾರೆ.

ಇದೇ ವೇಳೆ ಮಾಧ್ಯಮಗಳ ಮತಗಟ್ಟೆ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನ ಮತ ಹಾಕಿದ್ದಾರೆ. ಹೀಗಾಗಿ ಮತಗಟ್ಟೆ ಸಮೀಕ್ಷೆಗಳ ಹತ್ತಿರಕ್ಕೆ ಕಾಂಗ್ರೆಸ್ ಸ್ಥಾನ ಪಡೆದುಕೊಳ್ಳಲಿದೆ ಎಂದರು.

ಇನ್ನು ತಾವೂ ಮುಖ್ಯಮಂತ್ರಿ ರೇಸ್‌ನಲ್ಲಿರುವುದಾಗಿ ಸೋಮವಾರ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನನಗೆ ಐದು ಬಾರಿ ಗೆದ್ದಿರುವ ಅನುಭವವಿದೆ. ಸೂಕ್ತ ಸಮಯದಲ್ಲಿ ಸರಿಯಾದ ದಾಳ ಉರುಳಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.