ಈಗಿನ ಸುದ್ದಿ

'ಸುಪ್ರೀಂ' ಕ್ಷಮೆ ಯಾಚಿಸಿದ ಸಿಬಿಐ ನಿರ್ದೇಶಕರು

'ಸುಪ್ರೀಂ' ಕ್ಷಮೆ ಯಾಚಿಸಿದ ಸಿಬಿಐ ನಿರ್ದೇಶಕರು
Published On :

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ರಂಜಿತ್ ಕುಮಾರ್ ಅವರು ಸುಪ್ರೀಂ ಕೋರ್ಟ್ ಬಳಿ ಕ್ಷಮೆ ಯಾಚಿಸಿದ್ದಾರೆ.

ಪ್ರಧಾನ ಮಂತ್ರಿ ಸಚಿವಾಲಯ ಮತ್ತು ಕೇಂದ್ರ ಕಾನೂನು ಸಚಿವರೊಂದಿಗೆ ಕಲ್ಲಿದ್ದಲು ಹಗರಣದ ಮಾಹಿತಿಗಳನ್ನು ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬಿಐ ಸಂಸ್ಥೆ, ಇಂದು ತನ್ನ 2ನೇ ಪ್ರಮಾಣಪತ್ರವನ್ನು ಸಲ್ಲಿಸಿದೆ. ಪ್ರಮಾಣ ಪತ್ರದಲ್ಲಿ ಮಾಹಿತಿಗಳನ್ನು ಹಂಚಿಕೆ ಮಾಡಿಕೊಂಡಿರುವುದನ್ನು ಒಪ್ಪಿಕೊಂಡಿರುವ ಸಿಬಿಐ, ನ್ಯಾಯಾಲಯದ ಬಳಿ ಕ್ಷಮೆಯಾಚಿಸಿದೆ.

ಇಂದು ಸಿಬಿಐ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಹಲವು ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಸಿಬಿಐ ಹೇಳಿಕೊಂಡಿದೆ. ಅಲ್ಲದೆ ಹಳೆಯ ಪ್ರಮಾಣಪತ್ರದಲ್ಲಿದ್ದ ಮಾಹಿತಿಗಳನ್ನು ಮಾತ್ರ ಹಂಚಿಕೊಂಡಿದ್ದು, ಸ್ಥಿತಿಗತಿ ವರದಿಯನ್ನು ಹಂಚಿಕೆ ಮಾಡಿಕೊಂಡಿರಲಿಲ್ಲ ಎಂದು ಸಿಬಿಐ ತಿಳಿಸಿದೆ. ಅಂತೆಯೇ ಹಗರಣದಲ್ಲಿ ಈ ಮುಂಚೆ ಹೆಸರಿಸಲಾಗಿದ್ದ ಯಾವುದೇ ಆರೋಪಿಗಳ ಹೆಸರುಗಳನ್ನು ಮತ್ತು ಶಂಕಿತರನ್ನು ಕೈ ಬಿಟ್ಟಿಲ್ಲ. ನಿಗದಿಯಂತೆ ತನಿಖೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಸಿಬಿಐ ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಬಿಐ ನಿರ್ದೇಶಕ ರಂಜಿತ್ ಕುಮಾರ್ ಅವರು, 'ಮಾಹಿತಿ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಬಳಿ ಕ್ಷಮೆಯಾಚಿಸಿದ್ದೇನೆ. ಆದರೆ ಅಂದು ನಾವು ಹಗರಣದ ಮಾಹಿತಿಗಳನ್ನು ಮಾತ್ರ ಹಂಚಿಕೊಂಡಿದ್ದು, ಸ್ಥಿತಿಗತಿ ವರದಿಯನ್ನು ಹಂಚಿಕೆ ಮಾಡಿಕೊಂಡಿಲ್ಲ. ಆದರೂ ಈ ವಿಚಾರದಲ್ಲಿ ನನ್ನ ಪಾತ್ರವಿದೆ ಹೀಗಾಗಿ ಕ್ಷಮೆಯಾಚಿಸಿದ್ದೇನೆ ಎಂದು ಅವರು ಹೇಳಿದರು. ಅಲ್ಲದೆ ಇನ್ನು ಮುಂದೆ ಹಗರಣವನ್ನು ಸಿಬಿಐ ಸ್ವತಂತ್ರವಾಗಿ ತನಿಖೆ ನಡೆಸಲಿದೆ ಎಂದು ರಂಜಿತ್ ಕುಮಾರ್ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.