ಈಗಿನ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಚಿಕ್ಕೋಡಿ ಪ್ರಥಮ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಚಿಕ್ಕೋಡಿ ಪ್ರಥಮ
Published On :

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಒಟ್ಟು ಶೇ,77.47ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಬಾಲಕಿಯರು ಶೇ. 82.30ರಷ್ಟು ಹಾಗೂ ಬಾಲಕರು ಶೇ.73.25ರಷ್ಟು ಉತ್ತೀರ್ಣರಾಗಿದ್ದಾರೆ.

ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಅವರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ್ದು, ಸಂಜೆ ವೇಳೆಗೆ ಇಂಟರ್‌ನೆಟ್‌ನಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯವಾಗಲಿದೆ ಎಂದು ಹೇಳಿದರು.

ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು, ಮಂಡ್ಯ ದ್ವಿತೀಯ ಸ್ಥಾನ ಹಾಗೂ ಉಡುಪಿ ಜಿಲ್ಲೆ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಇನ್ನು ಬೀದರ್ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ಓರ್ವ ವಿದ್ಯಾರ್ಥಿ 625ಕ್ಕೆ 622 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಉಳಿದಂತೆ ಸರ್ಕಾರಿ ಶಾಲೆಗಳಲ್ಲಿ ಶೇ.77.71ರಷ್ಟು, ಅನುದಾನ ರಹಿತ ಶಾಲೆಗಳಲ್ಲಿ ಶೇ.86.23 ಹಾಗೂ ಅನುದಾನಿತ ಶಾಲೆಗಳಲ್ಲಿ ಶೇ.80.21ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 35 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಪ್ರಕಟವಾಗಿದೆ ಎಂದು ಕುಮಾರ್ ನಾಯಕ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.