ಈಗಿನ ಸುದ್ದಿ

ಸಜ್ಜನ್ ಕುಮಾರ್ ದೋಷಮುಕ್ತ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ

ಸಜ್ಜನ್ ಕುಮಾರ್ ದೋಷಮುಕ್ತ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ
Published On :

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ದೋಷ ಮುಕ್ತರಾಗಿರುವ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

ಪ್ರಕರಣದಲ್ಲಿ ಸಜ್ಜನ್ ಕುಮಾರ್ ನಿರ್ದೋಷಿ ಎಂದು ತೀರ್ಪು ನೀಡಿದ್ದ ಕಾರ್ಕರ್ ಡುಮಾ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿವೆ.

ತೀರ್ಪಿನ ಸಂಬಂಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ ಸಿಬಿಐ, ಪ್ರಸ್ತುತ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ಅಂತಿಮ ತೀರ್ಪು ಪ್ರಕಟವಾದ ನಂತರ, ಆ ತೀರ್ಪುನಲ್ಲಿ ಯಾವ ಅಂಶಗಳನ್ನು ಪರಿಗಣಿಸಿ ತೀರ್ಪು ನೀಡಲಾಗಿದೆ ಎಂಬ ವಿಚಾರಗಳನ್ನು ಪರಿಗಣಿಸಿ ಸಿಬಿಐ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

29 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕಂಟೋನ್ಮೆಂಟ್ ಬಳಿ ನಡೆದ ಹಿಂಸಾಚಾರದಲ್ಲಿ ಐವರ ಹತ್ಯೆಯಾದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರವಿಲ್ಲ ಎಂದು ಕಾರ್ಕರ್ ಡುಮಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಜೆ.ಆರ್. ಆರ್ಯನ್ ಅವರು ಅಭಿಪ್ರಾಯಪಟ್ಟಿದ್ದರು.

ಇದೇ ಪ್ರಕರಣದಲ್ಲಿ ಇತರೆ ಆರೋಪಿಗಳಾಗಿದ್ದ ಬಲ್ವಾನ್ ಖೊಕ್ಕರ್, ಮಹೇಂದರ್ ಯಾದವ್, ಕಿಶನ್ ಖೊಕ್ಕರ್, ಗಿರಿಧರ್ ಲಾಲ್, ಕ್ಯಾ. ಭಾಗ್ಮಾಲ್‌ರನ್ನು ದೋಷಿಗಳೆಂದು ಕೋರ್ಟ್ ತೀರ್ಪು ನೀಡಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.