ಕಳಂಕಿತ ಸಚಿವರ ರಾಜಿನಾಮೆಗೆ ಬಿಜೆಪಿ ಪಟ್ಟು

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಠಿಣ ನಿಲುವು ತಾಳಿರುವ ಪ್ರತಿಪಕ್ಷ ಬಿಜೆಪಿ, ಕಳಂಕಿತ ಸಚಿವರು ರಾಜಿನಾಮೆ ನೀಡುವವರೆಗೆ ಸಂಸತ್ತಿನಲ್ಲಿ ಯಾವುದೇ ಮಸೂದೆ ಅಂಗೀಕರಿಸಲು ನಾವು ಅವಕಾಶ ಕೊಡುವುದಿಲ್ಲ ಎಂದು ಮಂಗಳವಾರ ಹೇಳಿದೆ.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ರೇಲ್ವೆ ಸಚಿವ ಪವನ್ ಕುಮಾರ್ ಬನ್ಸಲ್ ಹಾಗೂ ಕಲ್ಲಿದ್ದಲು ಹಗರಣ ತನಿಖೆ ನಡೆಸುತ್ತಿರುವ ಸಿಬಿಐ ವರದಿಯಲ್ಲಿ ಹಸ್ತಕ್ಷೇಪ ಮಾಡಿರುವ ಆರೋಪ ಎದುರಿಸುತ್ತಿರುವ ಕಾನೂನು ಸಚಿವ ಅಶ್ವನಿ ಕುಮಾರ್ ರಾಜಿನಾಮೆ ನೀಡಬೇಕು, ಇಲ್ಲದಿದ್ದರೆ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಈ ಸಂಬಂಧ ಇಂದು ಸದನದಲ್ಲಿ ತೀವ್ರ ಕೋಲಾಹಾಲವೆಬ್ಬಿಸಿದ ಪ್ರತಿಪಕ್ಷಗಳು, ಇಬ್ಬರು ಸಚಿವರ ರಾಜಿನಾಮೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದವು. ಇದರಿಂದ ರಾಜ್ಯಸಭೆ ಹಾಗೂ ಲೋಕಸಭೆ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.
ಬನ್ಸಲ್ ಹಾಗೂ ಅಶ್ವನಿ ಕುಮಾರ್ ಅವರು ರಾಜಿನಾಮೆ ನೀಡದಿದ್ದರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಹತ್ವಾಕಾಂಕ್ಷಿ ಯೋಜನೆ ರಾಷ್ಟ್ರೀಯ ಆಹಾರ ಭದ್ರತಾ ಮಸೂದೆ ಹಾಗೂ ಭೂ ಸ್ವಾಧೀನ ಮಸೂದೆ ಅಂಗೀಕರಿಸಲು ಬಿಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಇಂದು ಎಲ್.ಕೆ.ಆಡ್ವಾಣಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಕ್ಷ ಈ ನಿರ್ಧಾರಕ್ಕೆ ಬಂದಿದ್ದು, ಬನ್ಸಲ್ ಹಾಗೂ ಕುಮಾರ್ ರಾಜಿನಾಮೆ ನೀಡುವವರೆಗೆ ಸಂಸತ್ ಕಲಾಪದಲ್ಲಿ ಭಾಗವಹಿಸುವುದಿಲ್ಲ ಮತ್ತು ಯಾವುದೇ ಚರ್ಚೆ ಇಲ್ಲದೆ ಆಹಾರ ಭದ್ರತಾ ಮಸೂದೆ ಮತ್ತು ಭೂ ಸ್ವಾದೀನ ಮಸೂದೆ ಅಂಗೀಕರಿಸಲು ನಾವು ಬಿಡುವುದಿಲ್ಲ ಎಂದು ಲೋಕಸಭೆ ಪ್ರತಿಪಕ್ಷ ಉಪ ನಾಯಕ ಗೋಪಿನಾಥ್ ಮುಂಡೆ ಅವರು ವರದಿಗಾರರಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


