ಈಗಿನ ಸುದ್ದಿ

ಮತ ಎಣಿಕೆ ಕೇಂದ್ರಗಳಿಗೆ ಭಾರಿ ಭದ್ರತೆ

ಮತ ಎಣಿಕೆ ಕೇಂದ್ರಗಳಿಗೆ ಭಾರಿ ಭದ್ರತೆ
Published On :

ಬೆಂಗಳೂರು: ಮೇ 5ರಂದು ರಾಜ್ಯದ 223 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದ್ದು, ಬೆಂಗಳೂರಿನಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮತ ಎಣಿಕೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಮಂಗಳವಾರ ತಿಳಿಸಿದ್ದಾರೆ.

ಮತ ಎಣಿಕೆ ಕೇಂದ್ರಗಳ ಭದ್ರತೆಗಾಗಿ 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿ 5 ಮತ ಎಣಿಕೆ ಕೇಂದ್ರಗಳಿಗೆ ಒಟ್ಟು 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರಿಗೆ ಮತ್ತು ರಾಜಕೀಯ ಪಕ್ಷಗಳ ಕಚೇರಿಗೂ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಔರಾದ್ಕರ್ ಹೇಳಿದರು.

ಫಲಿತಾಂಶ ಪ್ರಕಟಗೊಂಡ ನಂತರ ಪಟಾಕಿ ಸಿಡಿಸುವುದು ಹಾಗೂ ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ನಾಳೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.