ಈಗಿನ ಸುದ್ದಿ

ರೇಲ್ವೆ ಬಡ್ತಿಗಾಗಿ ಲಂಚ: ಮತ್ತೊಬ್ಬನ ಬಂಧನ

Published On :

ಚಂಡೀಗಢ: ರೇಲ್ವೆ ಬಡ್ತಿಗಾಗಿ 90 ಲಕ್ಷ ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ರೇಲ್ವೆ ಸಚಿವ ಪಿ.ಕೆ. ಬನ್ಸಲ್‌ರ ಸೋದರಳಿಯನ ಆಪ್ತ ಅಜಯ್ ಗಾರ್ಗ್‌ನನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಪ್ರಕರಣದ ತನಿಖೆಕೆಯನ್ನು ಚುರುಕುಗೊಳಿಸಿರುವ ಸಿಬಿಐ, ಈ ಸಂಬಂಧ ಅಜಯ್ ಗಾರ್ಗ್ ಅವರ ಮೊಬೈಲ್ ಕರೆಗಳ ಮೇಲೆ ನಿಗಾ ವಹಿಸಿತ್ತು. ಪ್ರಕರಣದಲ್ಲಿ ಅಜಯ್ ಸಹ ಭಾಗಿಯಾಗಿರುವುದನ್ನು ಖಚಿತಪಡಿಸಿಕೊಂಡ ಸಿಬಿಐ ಅಧಿಕಾರಿಗಳು ಇಂದು ಚಂಡೀಗಢದ ಅಜಯ್ ಅವರ ನಿವಾಸ ಮೇಲೆ ದಾಳಿ ಮಾಡಿ, ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಒಟ್ಟಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈವರೆಗೆ 8 ಮಂದಿಯನ್ನು ಬಂಧಿಸಿದ್ದಾರೆ.

ಈ ಮಧ್ಯೆ, ರೇಲ್ವೆ ಬಡ್ತಿಗಾಗಿ ಸಂಬಂಧಿಗಳು ಲಂಚ ಪಡೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರತಿಪಕ್ಷಗಳು, ಬನ್ಸಲ್‌ರ ರಾಜಿನಾಮೆಗೆ ಪಟ್ಟು ಹಿಡಿದು, ಸದನದ ಒಳಗೂ, ಹೊರಗೂ ತೀವ್ರ ಪ್ರತಿಭಟನೆ ನಡೆಸುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.