ಈಗಿನ ಸುದ್ದಿ

ಕರ್ನಾಟಕ 'ಕೈ' ವಶ: ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ

ಕರ್ನಾಟಕ 'ಕೈ' ವಶ: ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ
Published On :

ಬೆಂಗಳೂರು: ಮೇ 5ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡ ಕಾಂಗ್ರೆಸ್, ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ಸಂಖ್ಯೆ(113) ಪಡೆಯುವಲ್ಲಿ ಯಶಸ್ವಿಯಾಗಿದೆ.

ಕರ್ನಾಟಕ ವಿಧಾನಸಭೆ ಪ್ರವೇಶಕ್ಕಾಗಿ ಕಳೆದ ಭಾನುವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಂತೆಯೇ ಅನುಕಂಪದ ಆಧಾರದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿದ್ದ ಬಿಜೆಪಿ ಸಂಪೂರ್ಣ ನೆಲಕಚ್ಚಿದ್ದು, ಸಚಿವರು ಪ್ರತಿನಿಧಿಸಿದ್ದ ಬಹುತೇಕ ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಳ್ಳುವ ಮೂಲಕ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಆದರೆ ಕಳೆದ ಬಾರಿ ಮೂರನೇ ಸ್ಥಾನದಲ್ಲಿದ್ದ ಜೆಡಿಎಸ್ ಪಕ್ಷ 2ನೇ ಸ್ಥಾನಕ್ಕೆ ಜಿಗಿದಿದೆ.

ಕರ್ನಾಟಕ ವಿಧಾನಸಭೆಯ ಒಟ್ಟು 224 ಕ್ಷೇತ್ರಗಳ ಪೈಕಿ 223 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಸುಮಾರು 2,900ಕ್ಕೂ ಅಧಿಕ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ ಎಲ್ಲಾ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 121 ಸ್ಥಾನಗಳನ್ನು ಪಡೆದು ಸರ್ಕಾರ ರಚಿಸುವ ಕಾರ್ಯದಲ್ಲಿ ತೊಡಗಿದೆ. ಅಂತೆಯೇ ತಲಾ 40 ಸ್ಥಾನಗಳನ್ನು ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಪಕ್ಷ ಸ್ಥಾನಕ್ಕೆ ತಳ್ಳಲ್ಪಟ್ಟಿವೆ. ಉಳಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಕೆಜೆಪಿ ಪಕ್ಷಕ್ಕೆ ಕೇವಲ 6 ಸ್ಥಾನಗಳು ಮಾತ್ರ ಲಭಿಸಿದ್ದು, ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ 4 ಸ್ಥಾನಗಳು ಲಭಿಸಿವೆ. ಪಕ್ಷೇತರರು ಮತ್ತು ಇತರೆ ಪಕ್ಷಗಳು ಒಟ್ಟು 12 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ಸಂಪೂರ್ಣ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕರ್ನಾಟಕದ ಗೆಲುವಿಗೆ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರ್ಷವ್ಯಕ್ತಪಡಿಸಿದ್ದು, ಭ್ರಷ್ಟಾಚಾರ ರಹಿತ ಮತ್ತು ಅಭಿವೃದ್ಧಿ ಪರ ಆಡಳಿತ ನೀಡುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.