ಕಾವೇರಿ ಮೇಲ್ವಿಚಾರಣಾ ಸಮಿತಿ ರಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ಮೇಲ್ವಿಚಾರಣಾ ಸಮಿತಿ ರಚನೆ ಮಾಡಿದೆ.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದ ಪರ ವಕೀಲ ನಾರಿಮನ್ ಅವರು ನೀಡಿದ ಸಲಹೆ ಒಪ್ಪಿದ ಸುಪ್ರೀಂ ಕೋರ್ಟ್, ತಾತ್ಕಾಲಿಕ ವ್ಯವಸ್ಥೆಯಾಗಿ ಮೇಲ್ವಿಚಾರಣಾ ಸಮಿತಿ ರಚಿಸಿದೆ.
ಕೇಂದ್ರ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚಿಸಲಾಗಿದ್ದು, ಕೇಂದ್ರ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳುವವರೆಗೂ ಈ ಸಮಿತಿ ಅಸ್ತಿತ್ವದಲ್ಲಿರಲಿದೆ. ಸುಪ್ರೀಂ ಕೋರ್ಟ್ನ ತಾತ್ಕಾಲಿಕ ಮೇಲ್ವಿಚಾರಣಾ ಸಮಿತಿಯಲ್ಲಿ ಕರ್ನಾಟಕ, ಕೇರಳ. ತಮಿಳುನಾಡು ಹಾಗೂ ಪಾಂಡಿಚೇರಿ ಈ ನಾಲ್ಕು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸಮಿತಿಯ ಸದಸ್ಯರಾಗಿದ್ದಾರೆ.
ಇನ್ನು ಈ ಬಗ್ಗೆ ಯಾವುದೇ ಅನುಮಾನಗಳಿದ್ದರೆ ಸುಪ್ರೀಂ ಕೋರ್ಟ್ನಿಂದ ನಿರ್ದೇಶನ ಪಡೆಯಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ನ ಮೇಲ್ವಿಚಾರಣಾ ಸಮಿತಿಯ ರಚನೆಯಿಂದಾಗಿ ಕಾವೇರಿ ನೀರು ನಿರ್ವಹಣಾ ಹಾಗೂ ನಿಯಂತ್ರಣ ಮಂಡಳಿ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


