ಈಗಿನ ಸುದ್ದಿ

ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತ: ಸಿದ್ದರಾಮಯ್ಯ

ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತ: ಸಿದ್ದರಾಮಯ್ಯ
Published On :

ಬೆಂಗಳೂರು: ರಾಜ್ಯದಲ್ಲಿ ಪಾರದರ್ಶಕ ಆಡಳಿತ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ ಕರ್ನಾಟಕ ಜನತೆಗೆ ನಾನು ಋಣಿಯಾಗಿದ್ದು, ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಸ್ಥಿರ ಸರ್ಕಾರವಿರಲಿ ಎನ್ನುವುದು ಜನತೆಯ ಅಭಿಮತವಾಗಿತ್ತು. ಅದರಂತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಅವರಿಗೆ ನಾನು ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.

ಶಾಸಕಾಂಗ ಪಕ್ಷದ ನಾಯಕನಾಗಿ ನನ್ನನ್ನು ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್‌ಗೆ ನಾನು ನನ್ನ ಕೃತಜ್ಞತೆ ಸಲ್ಲಿಸುತ್ತೇನೆ. ಅದರಲ್ಲಿಯೂ ಪ್ರಮುಖವಾಗಿ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಿ.ಹೆಚ್.ಮುನಿಯಪ್ಪ ಅವರಿಗೆ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಹದಗೆಟ್ಟಿರುವ ಆಡಳಿತವನ್ನು ಸರಿದಾರಿಗೆ ತರುವುದು ನನ್ನ ಮೊದಲ ಗುರಿಯಾಗಿದ್ದು, ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತವನ್ನು ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ನಾಳೆಯೇ ದೆಹಲಿಗೆ ಸಿದ್ದರಾಮಯ್ಯ
ಶಾಸಕಾಂಗ ಪಕ್ಷದ ನೂತನ ನಾಯಕರಾಗಿರುವ ಸಿದ್ದರಾಮಯ್ಯ ಅವರು ನಾಳೆಯೇ ದೆಹಲಿ ತೆರಳಲಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಅಂತೆಯೇ ನೂತನ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಕುರಿತು ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.