ಸಿದ್ದುಗೆ ಪ್ರಧಾನಿ ಸಿಂಗ್ ಶುಭಾಶಯ

ನವದೆಹಲಿ: ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಕಾಂಗ್ರೆಸ್ ನಾಯಕ ಸಿದ್ದರಾಮ್ಯ ಅವರಿಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಶನಿವಾರ ಶುಭಾಶಯ ಕೋರಿದ್ದಾರೆ.
ನಿನ್ನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಸಿದ್ದು ಅವರಿಗೆ ಇಂದು ದೂರವಾಣಿ ಕರೆ ಮಾಡಿದ ಪ್ರಧಾನಿ ಸಿಂಗ್ ಅವರು 'ಒಳ್ಳೆಯ ಭವಿಷ್ಯ ನಿಮ್ಮದಾಗಲಿ' ಎಂದು ಹಾರೈಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಅವರ ಹೆಸರನ್ನು ಎಐಸಿಸಿ ವೀಕ್ಷಕರಾಗಿ ಬಂದಿದ್ದ ಕೇಂದ್ರ ರಕ್ಷಣಾ ಸಚಿವ ಎ.ಕೆ. ಆ್ಯಂಟನಿ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಘೋಷಿಸಿದರು. ಬಳಿಕ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಆಂಟನಿ ಅವರೊಂದಿಗೆ ಕೇಂದ್ರದ ಮತ್ತೊಬ್ಬ ಸಚಿವ ಜಿತೇಂದ್ರ ಸಿಂಗ್, ಗೋವಾದ ಮಾಜಿ ಮುಖ್ಯಮಂತ್ರಿ ಲೂಸಿನೋ ಪೆಲೀರಿಯೋ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಮಧುಸೂದನ ಮಿಸ್ತ್ರಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಾರ್ಯ ನಡೆಯಿತು.
ತೀವ್ರ ಪೈಪೋಟಿ ಇತ್ತು: ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ಪ್ರಬಲ ಪೈಪೋಟಿ ಇತ್ತು. ಜತೆಗೆ ಡಾ. ಪರಮೇಶ್ವರ ಹಾಗೂ ಡಿ.ಕೆ. ಶಿವಕುಮಾರ್ ಉಮೇದುವಾರಿಕೆ ವ್ಯಕ್ತಪಡಿಸಿದರು. ಹೀಗಾಗಿ ವೀಕ್ಷಕರ ತಂಡ ಶಾಸಕರ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿತು. ಆಯ್ಕೆ ಜಟಿಲವಾಗಿದ್ದ ಕಾರಣ ಗುಪ್ತ ಮತದಾನ ಮಾದರಿಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಸಲು ನಿರ್ಧರಿಸಲಾಯಿತು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 11.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


