ನಾನೂ ದಲಿತನೇ ನನಗೆ ಸಹಕಾರ ನೀಡಿ: ಸಿದ್ಧರಾಮಯ್ಯ

ಮೈಸೂರು: ನಾನೂ ದಲಿತನೇ ನನಗೆ ನಿಮ್ಮ ಸಹಕಾರ ನೀಡಿ ಎಂದು ನಿಯೋಜಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.
ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಿದ್ಧರಾಮಯ್ಯ ಅವರು, ನಾಡ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ರಾಜ್ಯಕ್ಕೆ ಒಳ್ಳೆಯದಾಗಲಿ, ರಾಜ್ಯದಲ್ಲಿ ಸಮೃದ್ಧಿ ನೆಲಸಲಿ ಎಂದು ಬೇಡಿಕೊಂಡಿದ್ದೇನೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು ಹೈಕಮಾಂಡ್. ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿದ್ದೇವೆ. ಗುಲ್ಬರ್ಗಾ ಸೇರಿದಂತೆ ಇತರೆಡೆ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರಲ್ಲಿ ನಾನು ಮನವಿ ಮಾಡುತ್ತಿದ್ದೇನೆ. ನಾನು ಕೂಡ ಓರ್ವ ದಲಿತನೇ. ನನಗೆ ನಿಮ್ಮ ಸಹಕಾರ ಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಅಂತೆಯೇ ಮೈಸೂರಿನಲ್ಲಿರುವ ಸಾಹಿತಿ ದೇವನೂರು ಮಹಾದೇವ ಅವರ ಮನೆಗೆ ಭೇಟಿ ನೀಡಿದ ಸಿದ್ದ ರಾಮಯ್ಯ ಅವರು, ಪರಸ್ಪರ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ದೇವನೂರು ಮಹಾದೇವ ಅವರು 40 ವರ್ಷಗಳಷ್ಟು ಹಳೆಯ ಸ್ನೇಹಿತರು. ಹೀಗಾಗಿ ಅವರೊಂದಿಗೆ ಮಾತನಾಡಲು ಬಂದಿದ್ದೆ ಎಂದು ಹೇಳಿದರು.
ಈ ನಡುವೆ ತಮ್ಮ ಪರವಾಗಿ ರಾಜ್ಯಾದ್ಯಂತ ದಲಿತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿದ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರತಿಭಟನೆ ಸರಿಯಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರಬೇಕು. ಯಾವ ಸಂದರ್ಭದಲ್ಲಿ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದು ಹೈಕಮಾಂಡ್ಗೆ ತಿಳಿದಿದೆ. ಹಾಗಾಗಿ ಪ್ರತಿಭಟನಾಕಾರರು ಶಾಂತರಾಗಬೇಕು ಮತ್ತು ಕೂಡಲೇ ಪ್ರತಿಭಟನೆಯನ್ನು ಕೈ ಬಿಡಬೇಕು ಎಂದು ಮನವಿ ಮಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


