ಈಗಿನ ಸುದ್ದಿ

ರಾಜಿನಾಮೆಗೆ ಆಗ್ರಹಿಸಿ ಪ್ರಧಾನಿ ನಿವಾಸದೆದುರು ಪ್ರತಿಭಟನೆ

ರಾಜಿನಾಮೆಗೆ ಆಗ್ರಹಿಸಿ ಪ್ರಧಾನಿ ನಿವಾಸದೆದುರು ಪ್ರತಿಭಟನೆ
Published On :

ನವದೆಹಲಿ: ಕೇಂದ್ರ ಸಚಿವರಾದ ಪಿ.ಕೆ. ಬನ್ಸಲ್ ಹಾಗೂ ಅಶ್ವನಿ ಕುಮಾರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ, ಈಗ ಪ್ರಧಾನಿ ಮನಮೋಹನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು  ಭಾನುವಾರ ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ಬೆಳಗಿನಿಂದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನಿವಾಸದ ಎದುರು ಜಾಮಾವಣೆಗೊಂಡು ಪ್ರಧಾನಿ ಅವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಕ್ಷಣೆಗೆಂದು ಇಡಲಾಗಿದ್ದ ಎರಡು ಬ್ಯಾರಿಕೇಡ್‌ಗಳನ್ನು ಕಾರ್ಯಕರ್ತರು ಮುರಿದು ಹಾಕಿದ್ದಾರೆ.

ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗುಂಪನ್ನು ಚದುರಿಸಲು ಜಲಫಿರಂಗಿ ಪ್ರಯೋಗಿಸಲಾಗಿದೆ. ಪ್ರಧಾನಿ ನಿವಾಸಕ್ಕೆ ಪೊಲೀಸರು ಸೂಕ್ತ ಭದ್ರತೆ ಕಲ್ಪಿಸಿದ್ದು, ಭಾರತೀಯ ದಂಡ ಸಂಹಿತೆ ಕಾಯ್ದೆಯಡಿ ಹಲವು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅಲ್ಲದೆ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಮೆಟ್ರೋ ನಿಲ್ದಾಣವನ್ನು ಬೆಳಿಗ್ಗೆ 11 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ವಾತಾವರಣ ತಿಳಿಗೊಂಡ ನಂತರ ಪೊಲೀಸರ ಸೂಚನೆ ಮೇರೆಗೆ ಮೆಟ್ರೋ ರೈಲುಗಳು ಪುನಾರಂಭಗೊಳ್ಳಲಿದೆ ಎಂದು ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ.

ಸಿಬಿಐ ವರದಿ ತಿದ್ದುಪಡಿ ಪ್ರಕರಣ ಮತ್ತು ಬಡ್ತಿಗಾಗಿ ಲಂಚ ಪ್ರಕರಣದಲ್ಲಿ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಪ್ರಧಾನಿ ಸಿಂಗ್ ಅವರು, ಶುಕ್ರವಾರ ಕಾನೂನು ಸಚಿವ ಅಶ್ವನಿ ಕುಮಾರ್ ಹಾಗೂ ಕೇಂದ್ರ ರೇಲ್ವೆ ಸಚಿವ ಪಿ.ಕೆ. ಬನ್ಸಲ್ ಅವರಿಂದ ರಾಜಿನಾಮೆ ಪಡೆದುಕೊಂಡಿದ್ದರು. ಆದರೆ ಇದೀಗ ಪ್ರತಿಪಕ್ಷಗಳು ಪ್ರಧಾನಿ ಸಿಂಗ್ ಅವರ ರಾಜಿನಾಮೆಗೆ ಆಗ್ರಹಿಸುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.