ಸಿಎಂ ಸಿದ್ದರಾಮಯ್ಯರಿಂದ 8 ನಿರ್ಣಯಗಳ ಅಂಗೀಕಾರ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಸಿದ್ದರಾಮಯ್ಯ ಅವರು 8 ವಿವಿಧ ನಿರ್ಣಯಗಳನ್ನು ಅಂಗೀಕಾರ ಮಾಡುವ ಸಾಧ್ಯತೆ ಇದೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಯುತ್ತಿದ್ದಂತೆಯೇ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕಚೇರಿಯನ್ನು ಪ್ರವೇಶಿಸಿ ತಮ್ಮ ಸ್ಥಾನದಲ್ಲಿ ಆಸೀನರಾದರು.
ಇದಕ್ಕೂ ಮೊದಲು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದ ಅಧಿಕಾರಿಗಳು ವಿಶೇಷ ಮೈಸೂರು ಪೇಟ ತೊಡಿಸಿ ಹೂಗುಚ್ಛ ನೀಡಿದರು. ಅಲ್ಲದೆ ಸಿಹಿ ತಿನ್ನಿಸುವ ಮೂಲಕ ನೂತನ ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿದರು. ಮುಖ್ಯಮಂತ್ರಿಗಳ ಕಚೇರಿಗೆ ಪುರೋಹಿತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ನಂತರ ಸಿದ್ದರಾಮಯ್ಯ ಅವರು ಕಡತಗಳನ್ನು ವೀಕ್ಷಿಸುವ ಮೂಲಕ ಅಧಿಕಾರ ವಹಿಸಿಕೊಂಡರು.
ಅಲ್ಲದೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿಶೇಷ ಅಧಿಕಾರವನ್ನು ಉಪಯೋಗಿಸಿಕೊಂಡು 8 ನಿರ್ಣಯಗಳನ್ನು ಅಂಗೀಕಾರ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಕೆಜಿಗೆ 1 ರುಪಾಯಿಯಂತೆ 30 ಕೆಜಿಯಷ್ಟು ಅಕ್ಕಿ ನೀಡಿಕೆ, ರೈತರ ಹಾಲಿನ ಪ್ರೋತ್ಸಾಹ ಧನವನ್ನು 2 ರುಪಾಯಿಂದ 4 ರುಪಾಯಿಗೆ ಏರಿಕೆ ಮಾಡುವುದು, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಾಲ ಮನ್ನಾ, ವಸತಿ ಫ್ಲಾಟ್‌ಗಳ ಮೇಲಿನ ಸಬ್ಸಿಡಿ 1.5 ಲಕ್ಷ ರುಪಾಯಿಗಳಿಗೆ ಏರಿಕೆ ಮತ್ತು ಎಸ್‌ಸಿ, ಎಸ್‌ಟಿ ನಿಗಮ ಮಂಡಳಿಯ ಸಾಲ ಮನ್ನಾ ಸೇರಿದಂತೆ ಒಟ್ಟು 8 ಪ್ರಮುಖ ನಿರ್ಣಯಗಳನ್ನು ಅಂಗೀಕಾರ ಮಾಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


