ಈಗಿನ ಸುದ್ದಿ

'ಸಿದ್ದು' ಪ್ರಮಾಣಕ್ಕೆ ಆಗಮಿಸಿದ್ದ ಅಭಿಮಾನಿ ಸಾವು

Published On :

ಬೆಂಗಳೂರು:  ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದ ಅಭಿಮಾನಿಯೊಬ್ಬ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮಯ್ಯ ಅವರ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಅಭಿಮಾನಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಕೆಳಗೆ ಬಿದ್ದಾಗ ಜನರ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತವ್ಯಕ್ತಿಯನ್ನು ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ನಿವಾಸಿ ಮಂಜಪ್ಪ ಎಂದು ಗುರುತಿಸಲಾಗಿದೆ. ಅಲ್ಲದೆ ಮೃತ ಮಂಜಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿ ಎಂದು ತಿಳಿದು ಬಂದಿದೆ.

ಪ್ರಮಾಣವಚನ ಸಮಾರಂಭ ಮುಗಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು, ಕಂಠೀರವ ಕ್ರೀಡಾಂಗಣದಿಂದ ನಿರ್ಗಮಿಸಿದರು. ಈ ಹಂತದಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಒಮ್ಮೆಲೇ ಕ್ರೀಡಾಂಗಣದಿಂದ ಹೊರಬರಲು ಯತ್ನಿಸಿದಾಗ ಪ್ರವೇಶ ದ್ವಾರ ಸಂಖ್ಯೆ 5ರಲ್ಲಿ ಕಾಲ್ತುಳಿತ ಉಂಟಾಯಿತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಂಜಪ್ಪ ಅವರಿಗೆ ಹೃದಯಾಘಾತವಾಗಿ, ಅವರು ಕೂಡಲೆ ಕೆಳಗೆ ಬಿದ್ದು ಜನರ ನೂಕುನುಗ್ಗಲಿಗೆ ಸಿಲುಕಿಕೊಂಡರು. ಇದನ್ನು ಗಮನಿಸಿದ ಪೊಲೀಸರು ಮಂಜಪ್ಪನನ್ನು ತಕ್ಷಣ ಸಮೀಪದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಜಪ್ಪ ಆಸ್ಪತ್ರೆಯಲ್ಲಿಯೇ ಮೃತಪಟ್ಟರು.

ರಾಜ್ಯ ಸರ್ಕಾರದಿಂದ 2 ಲಕ್ಷ ಪರಿಹಾರ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪದಗ್ರಹಣದ ಮಾಡಿದ ಬಳಿಕ ಉಂಟಾದ ಕಾಲ್ತುಳಿತದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಮಂಜಪ್ಪ ಕುಟುಂಬಕ್ಕೆ ರಾಜ್ಯ ಸರ್ಕಾರ ಎರಡು ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.

ಮಂಜಪ್ಪ ದಾಖಲಾಗಿದ್ದ ವಿಜಯ್ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಆತನ ಕುಟುಂಬಕ್ಕೆ ಎರಡು ಲಕ್ಷ ರುಪಾಯಿ ಪರಿಹಾರ ಘೋಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.