ಈಗಿನ ಸುದ್ದಿ

ನವಾಜ್ ಷರೀಫ್ ಪ್ರಮಾಣವಚನ ಸಮಾರಂಭಕ್ಕೆ ಸಿಂಗ್‌ಗೆ ಆಹ್ವಾನ

Published On :

ನವದೆಹಲಿ: ಇತ್ತೀಚಿಗೆ ನಡೆದ ಪಾಕಿಸ್ತಾನ ಸಂಸತ್ ಚುನಾವಣೆಯಲ್ಲಿ ನಾಯಕ ನವಾಜ್ ಷರೀಫ್ ನೇತೃತ್ವದ ಪಾಕಿಸ್ತಾನ ಮುಸ್ಲಿಂ ಲೀಗ್(ಪಿಎಂಎಲ್) ಭರ್ಜರಿ ಗೆಲವು ಸಾಧಿಸಿದ್ದು, ಮೂರನೇ ಬಾರಿಗೆ ಪಾಕ್ ಪ್ರಧಾನಿಯಾಗುತ್ತಿರುವ ನವಾಜ್ ಷರೀಫ್ ಅವರು ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರನ್ನು ಆಹ್ವಾನಿಸಿದ್ದಾರೆ.

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಪಿಎಂಎಲ್ ಪಕ್ಷವು ಭರ್ಜರಿ ಜಯ ದಾಖಲಿಸಿದ್ದು, ಸತತ ಮೂರನೇ ಬಾರಿಗೆ ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭಕ್ಕೆ ಸಾಕ್ಷಿಯಾಗುವಂತೆ ಪ್ರಧಾನಿ ಸಿಂಗ್ ಅವರನ್ನು ಷರೀಫ್ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ಸಿಂಗ್ ಅವರಿಗೆ ಆಹ್ವಾನ ನೀಡಿದ್ದು, ಅವರು ಬಂದರೆ ತಮಗೆ ಸಂತೋಷ ಮತ್ತು ಉಭಯ ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿಗೆ ಸಹಕಾರಿಯಾಗಲಿಗೆ ಎಂದು ಷರೀಫ್ ಹೇಳಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಇದೇ ವೇಳೆ ಭಯೋತ್ಪಾದನೆಯಿಂದ ಎರಡು ದೇಶಗಳು ನರಳಿ ಹೋಗಿವೆ. ಹೀಗಾಗಿ ಶಾಂತಿ ಸ್ಥಾಪನೆಗೆ ಉಭಯ ರಾಷ್ಟ್ರಗಳು ಮುಂದಾಗಬೇಕಿದೆ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.