ಕೋಲಾರದಲ್ಲಿ ಮಚ್ಚು ಲಾಂಗು ಪ್ರದರ್ಶಿಸಿದವರ ಬಂಧನ
ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನದ ವೇಳೆ ಮಚ್ಚು ಲಾಂಗು ಪ್ರದರ್ಶಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರಸಭಾ ಸದಸ್ಯರಾದ ಬಾಬು ಪ್ರಸಾದ್ ಸೇರಿದಂತೆ ಅವರ ಸಂಗಡಿಗರಾದ ಸಂತೋಷ್, ಸಂದೀಪ್ ಮತ್ತು ಲಕ್ಷ್ಮಿ ನಾರಾಯಣ್ ಎಂಬುವವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.
ಮೇ 5ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನದ ವೇಳೆ ಕೋಲಾರದ ಮತಗಟ್ಟೆ ಸಂಖ್ಯೆ 121 ಮತ್ತು 122ರ ಆವರಣದಲ್ಲಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ಬಾಬು ಪ್ರಸಾದ್ ಮತ್ತು ಆತನ ಸಂಗಡಿಗರು ತಮ್ಮ ವಿರೋಧಿ ಬಣದ ಮೇಲೆ ಮಚ್ಚು ಲಾಂಗುಗಳನ್ನು ಹಿಡಿದು ದಾಳಿ ಮಾಡಲು ಮುಂದಾಗಿದ್ದರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದಲೇ ಪರಾರಿಯಾಗಿದ್ದನು.
ಇದು ಸುದ್ದಿಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಅಲ್ಲದೆ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೊಲೀಸರಿಗೆ ಆದೇಶಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ನಗರಸಭಾ ಸದಸ್ಯ ಬಾಬು ಪ್ರಸಾದ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಇನ್ನೂ ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

