ಮಾಯ ಕೊಡ್ನಾನಿ ಮರಣ ದಂಡನೆ ಮೇಲ್ಮನವಿಗೆ ಮೋದಿ ಸರ್ಕಾರ ತಡೆ

ಅಹಮದಾಬಾದ್: ಬಲ ಪಂಥಿಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ಮಾಜಿ ಸಚಿವೆ ಮಾಯಾ ಕೊಡ್ನಾನಿ, ಬಾಬು ಬಜರಂಗಿ ಹಾಗೂ ಇತರೆ ಎಂಟು ಜನರಿಗೆ ಮರಣ ದಂಡನೆ ಶಿಕ್ಷೆ ಕೋರಿ ಮೇಲ್ಮನವಿ ಸಲ್ಲಿಸುವ ತನ್ನ ನಿರ್ಧಾರಕ್ಕೆ ಸದ್ಯ ತಡೆ ನೀಡಿದೆ.
2002ರ ನರೋಡ ಪಟಿಯಾ ದಂಗೆ ಪ್ರಕರಣ ಸಂಬಂಧ ಕೊಡ್ನಾನಿ, ಬಜರಂಗಿ ಮತ್ತು ಇತರೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕೋರಿ ಹೈಕೋರ್ಟ್ಗೆ ಮನವಿ ಮಾಡುವಂತೆ ಸುಪ್ರೀಂ ಕೋರ್ಟ್ನ ವಿಶೇಷ ತನಿಖಾ ತಂಡ(ಎಸ್ಐಟಿ)ದ ಶಿಫಾರಸು ಪಾಲಿಸಲು ಈ ಮುಂಚೆ ಗುಜರಾತ್ ಸರ್ಕಾರ ನಿರ್ಧರಿಸಿತ್ತು. ಆದರೆ ಸರ್ಕಾರದ ಈ ನಿರ್ಧಾರವನ್ನು ಬಲ ಪಂಥಿಯವರು ಕಟುವಾಗಿ ಟೀಕಿಸಿದ್ದರು.
ಕೊಡ್ನಾನಿ, ಬಜರಂಗಿ ಮತ್ತು ಇತರೆ ಅಪರಾಧಿಗಳಿಗೆ ಕೆಳ ನ್ಯಾಯಾಲಯ ಈಗಾಗಲೇ ಜೀವಾವಧಿ ಶಿಕ್ಷೆ ವಿಧಿಸಿದೆ. ಆದರೆ ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಮತ್ತು ಗಲ್ಲು ಶಿಕ್ಷೆ ಕೋರಿ ಸರ್ಕಾರ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸುವ ನಿರ್ಧಾರಕ್ಕೆ ಸದ್ಯ ತಡೆ ಹಿಡಿಯಲಾಗಿದೆ. ಈ ಬಗ್ಗೆ ರಾಜ್ಯ ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಗುಜರಾತ್ ಹಣಕಾಸು ಸಚಿವ ಮತ್ತು ವಕ್ತಾರ ನಿತೀಶ್ ಪಟೇಲ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಗೋದ್ರೋತ್ತರ ನರೋಡಾ ಪಟಿಯಾ ದಂಗೆ ಪ್ರಕರಣ ಸಂಬಂಧ ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಮಾಯಾ ಕೊಡ್ನಾನಿ ಅವರಿಗೆ ಆಗಸ್ಟ್ 2012ರಲ್ಲಿ ವಿಶೇಷ ಕೋರ್ಟ್ 28 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದೇ ಪ್ರಕರಣ ಸಂಬಂಧ ಬಜರಂಗ ದಳದ ಕಾರ್ಯಕರ್ತ ಬಾಬು ಬಜರಂಗಿ ಅವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಲ್ಲದೆ ಇತರೆ ಎಂಟು ಆರೋಪಿಗಳಿಗೆ 31 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


