ಕಳಂಕರಹಿತರಿಗೆ ಸಂಪುಟದಲ್ಲಿ ಸ್ಥಾನ: ಸಿಎಂ ಸಿದ್ದು

ನವದೆಹಲಿ: ನಾಳೆ ಸಂಜೆಯೊಳಗೆ ನೂತನ ಸಂಪುಟ ಸೇರುವ ಸಚಿವರ ಪಟ್ಟಿ ಸಿದ್ಧವಾಗಲಿದ್ದು, ಇನ್ನು 2-3 ದಿನದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಸಿದ್ದು ಸಂಪುಟ ರಚನೆ ಸಂಬಂಧ ಪಕ್ಷದ ಹೈಕಮಾಂಡ್ನೊಂದಿಗೆ ಚರ್ಚಿಸಲು ಇಂದು ದೆಹಲಿಗೆ ಆಗಮಿಸಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನೂತನ ಸಚಿವರ ಪಟ್ಟಿ ಸಿದ್ಧವಾಗಲಿದ್ದು, ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಮತ್ತು ಯಾರನ್ನು ಸೇರಿಸಿಕೊಳ್ಳಬಾರದು ಎಂಬುದರ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. ಇದೇ ವೇಳೆ ಕಳಂಕ ರಹಿತರಿಗೆ ಸಂಪುಟದಲ್ಲಿ ಸ್ಥಾನ ನೀಡುವುದಾಗಿ ಸಿಎಂ ಭರವಸೆ ನೀಡಿದರು.
ಇನ್ನು ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಪೊಪೋಟಿ ಏರ್ಪಟ್ಟಿದ್ದು, 100ಕ್ಕು ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟು ತಮ್ಮ ಪರವಾಗಿ ಲಾಬಿ ನಡೆಸುತ್ತಿದ್ದಾರೆ.
ಈ ನಡುವೆ ಕಳಂಕಿತರಿಗೆ ಸಚಿವ ಸ್ಥಾನ ನೀಡದಂತೆ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕರು ತಮ್ಮ ಪ್ರತಿಸ್ಪರ್ಧಿ ಶಾಸಕರ ಅಕ್ರಮಗಳ ಬಗ್ಗೆ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡುತ್ತಿದ್ದಾರೆ.
ಇನ್ನು ಜಿಲ್ಲಾವಾರು ಹಾಗೂ ಹಿರಿತನದ ಪ್ರಾತಿನಿದ್ಯದ ಮೇಲೆ ಸಚಿವ ಸ್ಥಾನ ನೀಡಲು ಸಿಎಂ ಸಿದ್ದು ಮುಂದಾಗಿದ್ದು, ಜಿಲ್ಲಾವಾರು ಸಂಭವನಿಯ ಸಚಿವರ ಪಟ್ಟಿ ಈ ಕೆಳಗಿನಂತಿದೆ.
ಬೆಂಗಳೂರು ಗ್ರಾಮಾಂತರ- ಡಿ.ಕೆ.ಶಿವಕುಮಾರ್
ಬೆಂಗಳೂರು ನಗರ- ರೋಷನ್ ಬೇಗ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್
ಶಿವಮೊಗ್ಗ - ಕಾಗೋಡು ತಿಮ್ಮಪ್ಪ
ದಾವಣಗೆರೆ - ಎಸ್.ಎಸ್. ಮಲ್ಲಿಕಾರ್ಜುನ್, ಶಿವಮೂರ್ತಿ ನಾಯಕ್
ಗದಗ- ಎಚ್.ಕೆ.ಪಾಟೀಲ್
ಉಡುಪಿ-ಪ್ರಮೋದ್ ಮಧ್ವರಾಜ್
ಧಾರವಾಡ-ವೀರಣ್ಣ ಮತ್ತಿಕಟ್ಟಿ
ಬೆಳಗಾವಿ- ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಹಾಗೂ ಪ್ರಕಾಶ್ ಹುಕ್ಕೇರಿ
ಹಾಸನ- ವಾಲೇ ಮಂಜು
ಮಂಡ್ಯ - ಅಂಬರೀಷ್
ಮೈಸೂರು - ತನ್ವೀರ್ ಸೇಠ್, ಶ್ರೀನಿವಾಸ್ ಪ್ರಸಾದ್
ತುಮಕೂರು- ಟಿ.ಬಿ.ಜಯಚಂದ್ರ
ಯಾದಗಿರಿ- ಎ.ಬಿ. ಮಾಲಕರೆಡ್ಡಿ, ರಾಜಾ ವೆಂಕಟಪ್ಪ ನಾಯಕ
ಚಿತ್ರದುರ್ಗ- ಆಂಜನೆಯ
ಇನ್ನು ಮಹಿಳಾ ಕೋಟಾದಲ್ಲಿ ಉಮಾಶ್ರೀ ಹಾಗೂ ಮೊಟಮ್ಮ ಅವರ ಹೆಸರು ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


