'ಸಿಬಿಐಗೆ ಸ್ವಾಯತ್ತೆ' ಕಣ್ಣೊರೆಸುವ ತಂತ್ರ: ಬಿಜೆಪಿ

ನವದೆಹಲಿ:ಸಿಬಿಐ ಅನ್ನು ಬಾಹ್ಯ ಪ್ರಭಾವದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಸಚಿವರ ಸಮಿತಿ ರಚನೆ ಮಾಡಿರುವುದು ಕೇಂದ್ರ ಸರ್ಕಾರದ ಕಣ್ಣೊರೆಸುವ ತಂತ್ರ ಎಂದು ಬಿಜೆಪಿ ಬುಧವಾರ ಟೀಕಿಸಿದೆ.
ಸಿಬಿಐಗೆ ಸ್ವಾಯತ್ತೆ ನೀಡುವ ಸಚಿವರ ಸಮಿತಿ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ, ಲೋಕಪಾಲ ಮಸೂದೆ ಮೇಲಿನ ಚರ್ಚೆ ವೇಳೆ ಸಿಬಿಐಗೆ ಸ್ವಾಯತ್ತತೆ ನೀಡುವ ಬಗ್ಗೆ ಸುದೀರ್ಘ ಚರ್ಚೆಯಾಗಿದೆ ಮತ್ತು ಮೇಲ್ಮನೆಯ ಆಯ್ಕೆ ಸಮಿತಿಯಲ್ಲೂ ಆ ಬಗ್ಗೆ ಚರ್ಚಿಸಲಾಗಿದೆ. ಈ ಸಂಬಂಧ ಆಯ್ಕೆ ಸಮಿತಿ ತನ್ನ ಶಿಫಾರಸುಗಳನ್ನು ಮಾಡಿತ್ತು. ಅವುಗಳಿಗೆ ಕೇಂದ್ರ ಸಂಪುಟ ಒಪ್ಪಿಗೆಯೂ ನೀಡಿದೆ ಎಂದು ಜೇಟ್ಲಿ ತಿಳಿಸಿದರು.
ಸಿಬಿಐಗೆ ಸ್ವಾಯತ್ತೆ ನೀಡುವ ಸಂಬಂಧ ಹಣಕಾಸು ಸಚಿವ ಪಿ.ಚಿದಂಬರಂ ಅವರ ನೇತೃತ್ವದಲ್ಲಿ ಈಗ ಹೊಸದಾಗಿ ಸಚಿವರ ಸಮಿತಿ ರಚನೆ ಮಾಡಿರುವುದು ಒಂದು ಕಣ್ಣೊರೆಸುವ ತಂತ್ರ ಅಷ್ಟೆ. ಇದರಲ್ಲಿ ಹೊಸದೇನು ಇಲ್ಲ. ಲೋಕಸಭೆ ಅಂಗೀಕರಿಸಿರುವ ಲೋಕಪಾಲ ಮಸೂದೆಯಲ್ಲೂ ಸಿಬಿಐಗೆ ಸ್ವಾಯತ್ತೆ ನೀಡುವ ನಿಯಮ ಇದೆ ಎಂದು ಜೇಟ್ಲಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ನ ಸೂಚನೆ ಹಿನ್ನೆಲೆಯಲ್ಲಿ ನಿನ್ನೆ ಸರ್ಕಾರ ಸಚಿವರ ಸಮಿತಿ ರಚಿಸಿದ್ದು, ಈ ಸಮಿತಿಯಲ್ಲಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್, ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಸಚಿವ ಕಪಿಲ್ ಸಿಬಲ್, ಮಾಹಿತಿ ಮತ್ತು ಪ್ರಸಾರ ಸಚಿವ ಮನೀಷ್ ತಿವಾರಿ ಹಾಗೂ ಸಿಬ್ಬಂದಿ ಸಚಿವ ವಿ. ನಾರಾಯಣಸ್ವಾಮಿ ಇದ್ದಾರೆ.
ಸಿಬಿಐ ಮುಖ್ಯಸ್ಥ ರಂಜಿತ್ ಸಿನ್ಹಾ ಅವರು ಸಚಿವರ ಸಮಿತಿಗೆ ಪೂರಕ ನೆರವು ನೀಡಲಿದ್ದಾರೆ.
ಜು. 10ರಂದು ಸಲ್ಲಿಕೆ: ಸಿಬಿಐ ಅನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸಚಿವರ ಸಮಿತಿ ಕಾನೂನು ರೂಪಿಸಲಿದ್ದು, ಜು.10ರಂದು ಸುಪ್ರೀಂ ಮುಂದೆ ಸಲ್ಲಿಸಲಿದೆ.
ಕಲ್ಲಿದ್ದಲು ಹಂಚಿಕೆಗೆ ಸಂಬಂಧಿಸಿದ ಸ್ಥಿತಿಗತಿ ವರದಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಇತ್ತೀಚೆಗಷ್ಟೇ ಸಿಬಿಐ ಅನ್ನು ಮಾಲೀಕ ಹೇಳಿದಂತೆ ಕೇಳುವ ಪಂಜರದ ಗಿಳಿ ಎಂದು ಟೀಕಿಸಿತ್ತು. ಅಲ್ಲದೆ, ಸಿಬಿಐಗೆ ಸ್ವಾಯುತ್ತತೆ ನೀಡುವ ನಿಟ್ಟಿನಲ್ಲಿ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


