ಈಗಿನ ಸುದ್ದಿ

ತಪ್ಪಿತಸ್ಥರಿಗೆ ಅಜೀವ ನಿಷೇಧ ಹೇರಿ: ಶರದ್ ಪವಾರ್

Published On :

ನವದೆಹಲಿ: ಐಪಿಎಲ್‌ನಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದಾರೆಂದು ಆರೋಪಕ್ಕೆ ಗುರಿಯಾಗಿರುವ ಫಾಸ್ಟ್ ಬೌಲರ್ ಶ್ರೀಶಾಂತ್ ಮತ್ತು ರಾಜಸ್ತಾನ್ ರೋಯಲ್ಸ್ ತಂಡದ ಇನ್ನಿಬ್ಬರು ಆಟಗಾರರು ತಪ್ಪಿತಸ್ಥರೆಂದು ಸಾಬೀತಾದರೆ ಅವರಿಗೆ ಅಜೀವ ನಿಷೇಧ ಹೇರಿ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಾಜಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೂಲಕ ಹೊಸ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಅವರಿಗೆ ವೇದಿಕೆಯನ್ನು ಕಲ್ಪಿಸಲಾಗಿದೆ. ಅದೇ ವೇಳೆ ಈ ಆಟದಲ್ಲಿ ಅವರಿಗೆ ಸಾಕಷ್ಟು ಹಣವನ್ನೂ ನೀಡಲಾಗುತ್ತದೆ. ಇಂಥ ಕೃತ್ಯಗಳು ನಡೆದುದೇ ಆದಲ್ಲಿ ತಪ್ಪಿತಸ್ಥರ ವಿರುದ್ಧ ಬಿಸಿಸಿಐ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಯಾಕೆಂದರೆ ಇನ್ಮುಂದೆ ಯಾರೊಬ್ಬರೂ ಇಂಥಾ ತಪ್ಪುಗಳನ್ನು ಮಾಡಲು ಮುಂದಾಗಬಾರದು. ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಅಮಾನತುಗೊಳಿಸಬೇಕು. ಸ್ಪಾಟ್ ಫಿಕ್ಸಿಂಗ್ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರೂಪಿಸಿ, ಆಟಗಾರರು ತಪ್ಪಿತಸ್ಥರೆಂದು ಸಾಬೀತಾದರೆ ಅವರಿಗೆ ಅಜೀವ ನಿಷೇಧ ಹೇರಬೇಕೆಂದು ಶರದ್ ಪವಾರ್ ಹೇಳಿದ್ದಾರೆ.

ಅದೇ ವೇಳೆ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಾರತದ ಮಾಜಿ ವಿಕೆಟ್ ಕೀಪರ್ ಸಯ್ಯದ್ ಕೀರ್ಮಾನಿ ಒತ್ತಾಯಿಸಿದ್ದಾರೆ.

ಐಪಿಎಲ್ ಪಂದ್ಯಗಳಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದಾರೆ ಎಂಬ ಆರೋಪದಲ್ಲಿ ಫಾಸ್ಟ್ ಬೌಲರ್ ಶ್ರೀಶಾಂತ್, ಅಜಿತ್ ಚಂಡೀಲಾ, ಅಂಕಿತ್ ಚವಾಣ್ ಸೇರಿದಂತೆ 7 ಬುಕ್ಕಿಗಳನ್ನು ಗುರುವಾರ ಬಂಧಿಸಲಾಗಿದೆ.

"ನಮಗೆ ಈ ಸುದ್ದಿ ಕೇಳಿ ಅಚ್ಚರಿಯಾಗಿದೆ. ಈ ಬಗ್ಗೆ ತನಿಖೆ ನಡೆಸಲು ನಾವು ಎಲ್ಲ ರೀತಿಯ ಸಹಾಯವನ್ನು ಮಾಡುತ್ತೇನೆ. ಆಟದ ನಿಯಮ ವಿರುದ್ಧವಾಗಿ ಯಾರಾದರೂ ನಡೆದುಕೊಂಡಿದ್ದರೆ ನಾವದನ್ನು ಸಹಿಸಿಕೊಳ್ಳುವುದಿಲ್ಲ" ಎಂದು ರಾಜಸ್ತಾನ್ ರೋಯಲ್ಸ್ ತಂಡದ ಸಹ ಮಾಲೀಕತ್ವ ವಹಿಸಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.